More

    ವಿಜೃಂಭಣೆಯ ಬನಶಂಕರಿ ಅಮ್ಮನವರ ವಾರ್ಷಿಕ ಉತ್ಸವ

    ಕುಶಾಲನಗರ: ಹೆಬ್ಬಾಲೆ ಗ್ರಾಮ ದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಉತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು.

    ಬನಶಂಕರಿ ಅಮ್ಮ, ಬಸವೇಶ್ವರ, ರಾಮಲಿಂಗೇಶ್ವರ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರ ಸಹೋಗದಲ್ಲಿ ಶಕ್ತಿ ಸ್ವರೂಪಿಣಿ ಬನಶಂಕರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನೇತೃತ್ವದಲ್ಲಿ ದೇವಿ ಸನ್ನಿಧಿಯಲ್ಲಿ ಗಣಪತಿ ಪೂಜೆ, ರಕ್ಷಾಬಂಧನ, ಧ್ವಜಾರೋಹಣ, ನವಗ್ರಹ ಸ್ಥಾಪನೆ, ನವಗ್ರಹ ಪೂಜೆ, ಮಹಾಮಂಗಳಾರತಿ ಸೇರಿದಂತೆ ಇತರ ಪೂಜಾ ಕೈಂಕರ್ಯ ನಡೆಯಿತು. ಕಳಸ ಸ್ಥಾಪಿಸುವುದರೊಂದಿಗೆ ವಿವಿಧ ಕಾರ್ಯಗಳು ದೇವಸ್ಥಾನ ಸಮಿತಿ ಸದಸ್ಯರ ನೇತೃತ್ವದಲ್ಲಿ ನೆರವೇರಿತು.

    ಕ್ಷೀರಾಭಿಷೇಕ, ಗಣಪತಿ ಪೂಜೆ ನಂತರ ದೇವಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ರಾತ್ರಿ 8 ಗಂಟೆಗೆ ಬನದಲ್ಲಿ ಹರಕೆ ಹೊತ್ತ ಭಕ್ತರು ಅಗ್ನಿಕುಂಡ ತುಳಿದು ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಗ್ರಾಮವನ್ನು ತಳಿರು ತೋರಣ ಹಾಗೂ ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ವಿದ್ಯುತ್ ಅಲಂಕೃತ ಮಂಟಪದಲ್ಲಿ ಬನಶಶಂಕರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ನಂತರ ಬಸವೇಶ್ವರ ದೇವಾಲಯ ಬಳಿಯಿಂದ ಉತ್ಸವವನ್ನು ಮೆರವಣಿಗೆ ಮೂಲಕ ಪವಿತ್ರ ಬನಕ್ಕೆ ಕೊಂಡೊಯ್ಯಲಾಯಿತು.

    ಅನ್ನದಾನ : ದೇವಸ್ಥಾನ ಸಮಿತಿ ವತಿಯಿಂದ ರಾತ್ರಿ ಅಮ್ಮನವರ ದೇವಸ್ಥಾನದಲ್ಲಿ ಭಕ್ತರಿಗೆ ಅನ್ನಸಂರ್ತಪಣೆ ವ್ಯವಸ್ಥೆ ಮಾಡಲಾಗಿತ್ತು.
    ಜಾನಪದ ಕ್ರೀಡಾಕೂಟ: ಗ್ರಾಮದ ಯುವಕ ಸಂಘದ ಆಶ್ರಯದಲ್ಲಿ ಡಿ.12 ಮತ್ತು 13 ರಂದು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಎತ್ತಿನ ಗಾಡಿ ಓಟ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts