More

    ನೂರಕ್ಕೂ ಅಧಿಕ ಮನೆಗಳ್ಳತನ : ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಬಂಧನ

    ಬೆಂಗಳೂರು: ನೂರಕ್ಕೂ ಅಧಿಕ ಮನೆಗಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿರುವ ಕುಖ್ಯಾತ ಮನೆ ಕಳವು ಆರೋಪಿಯನ್ನು ಗೋವಿಂದರಾಜ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
    ಹೆಣ್ಣೂರು ನಿವಾಸಿಯಾದ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಬಂಧಿತ ಆರೋಪಿ.


    ಗೋವಿಂದರಾಜಪುರ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿ ೬೦ ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ ಈ ಸಂಬಂಧ ದಾಖಲಾಗಿದ್ದ ದೂರಿನನ್ವಯ ಕಾರ್ಯಾಚರಣೆ ನಡೆಸಿ ಗೋವಾದಲ್ಲಿ ಇದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


    ೧೬ ವಯಸ್ಸಿನಲ್ಲೇ ಮನೆಗಳ್ಳತನ ಆರಂಭಿಸಿದ್ದ:
    ವಿಲಾಸಿ ಜೀವನ ಕ್ಯಾಸಿನೋ ಚಟಕ್ಕಾಗಿ ಮನೆಗಳ್ಳತನದಲ್ಲಿ ಭಾಗಿಯಾಗುತ್ತಿದ್ದ ಆರೋಪಿ, ಕಳವು ಮಾಡಿದ ಮಾಲುಗಳನ್ನು ಅಡವಿಟ್ಟು ಬಂದ ಹಣದಲ್ಲಿ ಮೋಜಿನ ಜೀವನ ಮಾಡುತ್ತಿದ್ದ.
    ತನ್ನ ೧೬ ವಯಸ್ಸಿನಲ್ಲೇ ಮನೆಗಳ್ಳತನ ಆರಂಭಿಸಿದ್ದ. ಕಾರ್ತಿಕ್‌ಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಇದುವರೆಗೂ ನೂರಕ್ಕೂ ಅಧಿಕ ಮನೆಗಳ್ಳತನ ಕೃತ್ಯ ಎಸಗಿರುವ ಆರೋಪಿಯ ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ, ಹೆಣ್ಣೂರು, ಕೊತ್ತನೂರು ಮಾತ್ರವಲ್ಲದೇ ಮೈಸೂರು, ಹಾಸನದಲ್ಲಿಯೂ ಪ್ರಕರಣಳು ದಾಖಲಾಗಿವೆ. ಬೆಂಗಳೂರು ಪೊಲೀಸರಿಂದಲೇ ಬರೋಬ್ಬರಿ ಇಪ್ಪತ್ತಕ್ಕೂ ಹೆಚ್ಚು ಬಾರಿ ಬಂಧನವಾಗಿದ್ದಾನೆ. ಬೆಂಗಳೂರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ, ೨೦೦೮ ಹಾಗೂ ೨೦೧೦ ರಲ್ಲಿ ಪೊಲೀಸರ ಕಸ್ಟಡಿಯಿಂದ ಎಸ್ಕೇಪ್ ಆಗಿದ್ದರಿಂದ ಎಸ್ಕೇಪ್ ಕಾರ್ತಿಕ್ ಎಂದೇ ಕುಖ್ಯಾತಿ ಹೊಂದಿದ್ದಾನೆ.


    ಕಳೆದ ವರ್ಷ ನವೆಂಬರ್‌ನಲ್ಲಿ ಹೆಣ್ಣೂರು ಠಾಣಾ ಪೊಲೀಸರು ಕಾರ್ತಿಕ್‌ನನ್ನು ಬಂಧಿಸಿದ್ದರು. ಜನವರಿಯಲ್ಲಿ ಜೈಲಿನಲ್ಲಿ ಬಿಡುಗಡೆಯಾಗಿದ್ದ ನಂತರ ನಾಲ್ಕೈದು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಗೋವಿಂದರಾಜನಗರದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವೊಂದರಲ್ಲಿ ಭಾಗಿಯಾಗಿ ಗೋವಾಗೆ ತೆರಳಿದ್ದ ಕಾರ್ತಿಕ್‌ನನ್ನು ಗೋವಿಂದರಾಜನಗರ ಠಾಣಾ ಪೊಲೀಸರು ಬಂಧಿಸಿ ನಗರಕ್ಕೆ ಕರೆ ತಂದು ವಿಚಾರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಾಜ್ಯೋತ್ಸವ ರಸಪ್ರಶ್ನೆ - 21

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts