More

    ನಾಲ್ಕು ವರ್ಷಗಳ ಬಳಿಕ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ: ಯಾವಾಗ, ಎಲ್ಲಿ ನಡೆಯಲಿದೆ ?

    ನವದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಾಲ್ಕು ವರ್ಷಗಳ ಬಳಿಕ ತನ್ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜನೆಗೆ ಸಜ್ಜಾಗಿದೆ. ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಎರಡು ದಿನ ಮುಂಚಿತವಾಗಿ ಅಂದರೆ ಜನವರಿ 23ರಂದು ಹೈದರಾಬಾದ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. 2020ರಲ್ಲಿ ಕೊನೆಯದಾಗಿ ಸಮಾರಂಭ ನಡೆಸಲಾಗಿತ್ತು.

    ಕರೋನಾದಿಂದಾಗಿ ಬಿಸಿಸಿಐ ತಾತ್ಕಾಲಿಕವಾಗಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿತ್ತು. ಹೈದರಾಬಾದ್‌ನಲ್ಲಿ ನಿಗದಿಯಾಗಿರುವ ಸಮಾರಂಭದಲ್ಲಿ ಟೀಮ್ ಇಂಡಿಯಾ ಆಟಗಾರರು ಹಾಗೂ ಇಂಗ್ಲೆಂಡ್ ಕ್ರಿಕೆಟಿಗರು ಭಾಗವಹಿಸುವ ನಿರೀಕ್ಷೆ ಇದೆ. ಜೀವಮಾನ ಸಾಧನೆಗಾಗಿ ಸಿ.ಕೆ.ನಾಯ್ಡು ಪ್ರಶಸ್ತಿ, ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗನಿಗೆ ಪಾಲಿ ಉಮ್ರಿಗರ್ ಪ್ರಶಸ್ತಿ, ಅತ್ಯುತ್ತಮ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟಿರ್, ದೇಶೀಯ ಕ್ರಿಕೆಟ್‌ನ ಅತ್ಯುತ್ತಮ ಅಂಪೈರ್ ಹಾಗೂ ದೇಶೀಯ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡ ಸಹಿತ 25 ವಿಭಾಗಗಳಲ್ಲಿ ಪ್ರಶಸ್ತಿ ನೀಡಿ ಆಟಗಾರರನ್ನು ಗೌರವಿಸಲಾಗುವುದು. ಪ್ರತಿ ಪ್ರಶಸ್ತಿಯು ಟ್ರೋಫಿ ಜತೆಗೆ ಕನಿಷ್ಠ ₹1.50 ಲಕ್ಷದಿಂದ ಗರಿಷ್ಠ ₹25 ಲಕ್ಷ ಬಹುಮಾನ ಮೊತ್ತ ಒಳಗೊಂಡಿರಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts