More

    ಭಾರತದ ಅಭಿವೃದ್ಧಿಯ ಅಮೃತ ಕಾಲ ಆರಂಭ

    ಧಾರವಾಡ: ಭಾರತ ಸ್ವಾತಂತ್ರ್ಯ ಹೊಂದಿ 75ವರ್ಷಗಳಾಗಿ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ‘ಆಜಾದಿ ಕಾ ಅಮೃತ ಮಹೋತ್ಸವ’ ಹೆಸರಿನಲ್ಲಿ ವರ್ಷಪೂರ್ತಿ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬಂದಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದಂತೆ ಮುಂಬರುವ 25 ವರ್ಷಗಳ ಅವಧಿ ದೇಶದ ಅಭಿವೃದ್ಧಿಯ ಅಮೃತ ಕಾಲವಾಗಲಿದೆ. ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಕಾರ್ಯಕ್ರಮದ ಕರೆಗೆ ಜಿಲ್ಲೆಯಲ್ಲಿಯೂ ಉತ್ತಮ ಸ್ಪಂದನೆ ದೊರೆತಿದೆ. ಕಳೆದ ಎರಡು ದಿನಗಳಿಂದ ದೇಶದ ಮನೆಮನೆಗಳ ಮೇಲೆ ರಾಷ್ಟ್ರದ ಹೆಮ್ಮೆಯ ತ್ರಿವರ್ಣ ಧ್ವಜ ಹಾರಾಡುತ್ತಿರುವುದನ್ನು ನಾವೆಲ್ಲ ಕಣ್ತುಂಬಿಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು.

    ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

    ತುಪ್ಪರಿಹಳ್ಳದಿಂದ ಬೆಣ್ಣಿಹಳ್ಳಕ್ಕೆ ಸೇರುವ ಸುಮಾರು 1.5 ಟಿಎಂಸಿ ಅಡಿ ನೀರು ಬಳಸಿಕೊಂಡು ಹುಬ್ಬಳ್ಳಿ ಹಾಗೂ ನವಲಗುಂದ ತಾಲೂಕುಗಳ ಸುಮಾರು 10 ಸಾವಿರ ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಶ್ರೀ ಯೋಗೇಶ್ವರ ಏತ ನೀರಾವರಿ ಯೋಜನೆ ರೂಪಿಸಲಾಗಿದೆ. ಪ್ರಧಾನಮಂತ್ರಿಯವರ ಮಹಾತ್ವಾಕಾಂಕ್ಷೆಯ ಅಮೃತ ಸರೋವರ ಯೋಜನೆಯಡಿ ಜಿಲ್ಲೆಯ 100ಕ್ಕೂ ಅಧಿಕ ಕೆರೆ ಹಾಗೂ ಜಲ ಮೂಲಗಳನ್ನು ಬೃಹತ್ ನೀರಾವರಿ ಇಲಾಖೆಯ 50 ಕೋಟಿ ರೂ. ವಿಶೇಷ ಅನುದಾನ, ವಿವಿಧ ಕೈಗಾರಿಕೆಗಳ ಸಿಎಸ್​ಆರ್ ಹಾಗೂ ನರೇಗಾ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ 35 ಗ್ರಾಪಂಗಳನ್ನು ಆಯ್ದುಕೊಂಡು ಗ್ರಾಮಗಳ ಸಮಗ್ರ ಅಭಿವೃದ್ಧಿ ಪಡಿಸಲಾಗುತ್ತಿದೆ. ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆಯಲ್ಲಿ ಜಿಲ್ಲೆಯ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸಲಾಗಿದೆ ಎಂದರು.

    ನ್ಮಾನ: ಶಿವಾನಂದ ತಿಮ್ಮಾಪುರ (ಸಾಮಾಜಿಕ ಸೇವೆ), ಅದಿತಿ ಕ್ಷಾತ್ರತೇಜ (ಕ್ರೀಡೆ), ಡಾ. ಬಸು ಬೇವಿನಗಿಡದ ಮತ್ತು ಡಾ.ಎಸ್.ಬಿ. ಬಸಟ್ಟೆ (ಸಾಹಿತ್ಯ), ಜಿ.ಕೆ. ಹಿರೇಮಠ (ಶಿಕ್ಷಣ) ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸುಧಾರಣಾ ಇಲಾಖೆಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಮಿತಾ ಅಂಗಡಿ (ಪ್ರಥಮ), ಪ್ರಬಂಧ ಸ್ಪರ್ಧೆಯಲ್ಲಿ ಕಾವ್ಯ ಅಣ್ಣಿಗೇರಿ (ಪ್ರಥಮ), ಗೀತ ಗಾಯನ ಸ್ಪರ್ಧೆಯಲ್ಲಿ ಅನುಷ್ಕಾ ರಾಘವೇಂದ್ರ (ಪ್ರಥಮ) ಮತ್ತು ಪ್ರೌಢಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಚೈತನ್ಯ ಪಾಟೀಲ (ಪ್ರಥಮ), ಪ್ರಬಂಧ ಸ್ಪರ್ಧೆಯಲ್ಲಿ ಸುಧಾ ದಾನಮ್ಮನವರ (ಪ್ರಥಮ), ಗೀತ ಗಾಯನ ಸ್ಪರ್ಧೆಯಲ್ಲಿ ಸುಪ್ರಜಾ ಕಾಮತ್ (ಪ್ರಥಮ) ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

    2022ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳ ವಿದ್ಯಾರ್ಥಿಗಳಾದ ಸಾನಿಕಾ ಗುಂಡುರಾವ್, ಕವಿತಾ ಇನಾಮತಿ, ಶ್ರೀಕಾಂತ ಸುಲದಾಳ ಮತ್ತು ವಿನಾಯಕ ಬಿ.ಎಂ ಅವರನ್ನು ಸನ್ಮಾನಿಸಲಾಯಿತು.

    ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತ ಲಾಭೂರಾಮ್ ಜಿಪಂ ಸಿಇಒ ಡಾ. ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts