More

    ಜಾನಪದ ಸಾಹಿತ್ಯ ಉಳಿಸಿ ಬೆಳೆಸುವುದು ದೊಡ್ಡ ಸವಾಲು

    ಮೂಗೂರು: ಜಾನಪದ ಸಾಹಿತ್ಯದ ಮೂಲವನ್ನು ಹುಡುಕುವುದು ಹಾಗೂ ಅದನ್ನು ಉಳಿಸಿ ಬೆಳೆಸುವುದು ಕನ್ನಡಿಗರಿಗೆ ದೊಡ್ಡ ಸವಾಲಾಗಿದೆ ಎಂದು ಜಾನಪದ ಗಾಯಕ ನರಸಿಂಹಮೂರ್ತಿ ಹೇಳಿದರು.

    ಮೂಗೂರಿನ ಕರ್ನಾಟಕ ಪಬ್ಲಿಕ್ ಶಾಲೆಯ ಶ್ರೀ ತ್ರಿಪುರಸುಂದರಿ ರಂಗ ವೇದಿಕೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರೌಢಶಾಲಾ ವಿಭಾಗದ ಶಾಲಾ ವಾರ್ಷಿಕೋತ್ಸವ ಹಾಗೂ ಶಾರದಾ ಪೂಜೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಜಾನಪದ ಸಾಹಿತ್ಯ ಎನ್ನುವುದು ಆಕಾಶದಷ್ಟು ವಿಶಾಲ, ಸಾಗರದಷ್ಟು ಆಳವಾದದ್ದು. ಸರ್ಕಾರಿ, ಖಾಸಗಿ ಶಾಲೆಗಳ ಮಧ್ಯೆ ಪೈಪೋಟಿ ಏರ್ಪಟ್ಟಿದ್ದು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಪ್ರತಿಭೆಯನ್ನು ಕುಗ್ಗಿಸುತ್ತಿದೆ ಎಂಬ ಚಿಂತೆ ಕಾಡತೊಡಗಿದೆ. ವಿದ್ಯಾರ್ಥಿಗಳು ಭವಿಷ್ಯವನ್ನು ಉಜ್ವಲಗೊಳಿಸುವತ್ತ ಕನಸು ಕಾಣಬೇಕಿದೆ. ಅದರಂತೆಯೇ ಅಂಬೇಡ್ಕರ್ ಅವರು ತಮ್ಮದೇ ತತ್ವ-ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿದ್ದರಿಂದ ವಿಶ್ವಜ್ಞಾನಿ ಎನಿಸಿಕೊಂಡರು. ಹಾಗೆಯೇ ವಿದ್ಯಾರ್ಥಿಗಳು ಅವರ ಆದರ್ಶ, ಜೀವನದ ಮೌಲ್ಯ ಅರಿತು ಶಾಲೆಗೆ, ಪಾಲಕರಿಗೆ ಕೀರ್ತಿ ತರುವಂತಹ ಸಾಧನೆ ಮಾಡಬೇಕೆಂದು ಕಿವಿಮಾತು ಹೇಳಿದರು.

    ಉಪಪ್ರಾಂಶುಪಾಲ ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಮಹಾದೇವಸ್ವಾಮಿ, ಬಿಆರ್‌ಸಿ ನಾಗೇಶ್, ಪ್ರಾಂಶುಪಾಲರಾದ ಮಹೇಶ್, ನಾಗಸ್ವಾಮಿ , ರಮೇಶ್, ಕಾವೇರಿ, ಮರಿಸ್ವಾಮಿ, ಕೇಶವ್, ಮಲ್ಲೇಶ್, ವೀಣಾ, ಅಧ್ಯಾಪಕರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts