ಮಾದಿಗ ಸಮುದಾಯದ ಆಶೀರ್ವಾದ ನನ್ನ ಮೇಲಿದೆ

GOVINDAPPA BG ex MLA (1)
Published on

ಹೊಸದುರ್ಗ: ಮಾದಿಗ ಸಮುದಾಯದ ಆಶೀರ್ವಾದದಿಂದ ಮತ್ತೆ ಶಾಸಕನಾಗಿ ಆಯ್ಕೆಯಾಗಿದ್ದೇನೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.

ತಾಲೂಕು ಮಾದಿಗ ಸಮಾಜ ಪಟ್ಟಣದ ಆಶೋಕ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸಮುದಾಯದ ಸಚಿವರು, ಶಾಸಕರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಸಮುದಾಯದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲು ಬದ್ಧನಾಗಿದ್ದು, ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸುವಲ್ಲಿ ಬದ್ದತೆಯಿಂದ ಕೆಲಸ ಮಾಡುತ್ತೇನೆ. ಎಲ್ಲ ಹಿಂದುಳಿದ ಜನರ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net