ಮನೆಯಿಂದ ಹೊರಹೋದ ಕೆಲವೇ ಗಂಟೆಗಳಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತೆಯರ ಮೃತದೇಹ ಪತ್ತೆ

ಚಿತ್ರಕೂಟ (ಮಧ್ಯಪ್ರದೇಶ): ಇಬ್ಬರು ಅಪ್ರಾಪ್ತೆಯರ ಮೃತದೇಹ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಧ್ಯಪ್ರದೇಶದ ಚಿತ್ರಕೂಟ ಜಿಲ್ಲೆಯ ಮೌ ತೆಹಸಿಲ್​ನ ಬಳಿ ಬರುವ ಕತೈಯ ಖದರ್ ಎಂಬ ಹಳ್ಳಿಯಲ್ಲಿ ಪತ್ತೆಯಾಗಿದೆ.

ಇದು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿತ್ರಕೂಟ ಎಸ್​ಎಸ್​ಪಿ ಮನೋಜ್​ ಜಾ ಈ ಕುರಿತು ಮಾಹಿತಿ ನೀಡಿದ್ದು, ಮೃತ ದೇಹಗಳನ್ನು ನೋಡಿದಾಗ ತಾವೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೀತಿಯಲ್ಲಿ ಕಂಡು ಬಂದಿದ್ದು, ಸದ್ಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಹುಡುಗಿಯರು ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಇಬ್ಬರು ಮನೆಯಿಂದ 1 ಗಂಟೆ ವೇಳೆಗೆ ಹಗ್ಗದೊಂದಿಗೆ ಹೊರಗೆ ಹೋಗಿದ್ದಾರೆ. ಆದರೆ ಸಂಜೆ 4 ಗಂಟೆ ಸುಮಾರಿಗೆ ಗ್ರಾಮದಿಂದ ಸುಮಾರು 500 ಮೀ. ದೂರದಲ್ಲಿರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಿದ್ದು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಎಸ್​ಎಸ್​ಪಿ ತಿಳಿಸಿದ್ದಾರೆ. (ಏಜೆನ್ಸೀಸ್)

One Reply to “ಮನೆಯಿಂದ ಹೊರಹೋದ ಕೆಲವೇ ಗಂಟೆಗಳಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತೆಯರ ಮೃತದೇಹ ಪತ್ತೆ”

  1. ಅಷ್ಟು ಎತ್ತರಕ್ಕೆ ಹೋಗಿ ನೇಣು ಹಾಕಿಕೊಳ್ಳಲು ಸಾಧ್ಯವೇಯಿಲ್ಲ. ಇದರಲ್ಲೇನೋ ರಹಸ್ಯವಡಗಿದೆ. ಸರಿಯಾದ ತನಿಖೆ ಮಾಡಿದರೆ ಸತ್ಯಸಂಗತಿ ಹೊರಬರಬಹುದು.

Comments are closed.