22.8 C
Bengaluru
Saturday, January 18, 2020

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಗೆ ಅಂತ್ಯ ಹಾಡುತ್ತಾ?

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿದ್ದ ರಾಜಕೀಯ ಅಸ್ಥಿರತೆಯ ಗ್ರಹಣ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳಂತೆಯೇ ಜನಾಭಿಪ್ರಾಯ ರೂಪುಗೊಂಡಿದ್ದರೆ, ಬಿಜೆಪಿ ಸರ್ಕಾರ ಪೂರ್ಣ ಬಹುಮತ ಪಡೆದು ಮುನ್ನಡೆಯಲಿದೆ. ಒಂದು ವೇಳೆ ಕಾಂಗ್ರೆಸ್-ಜೆಡಿಎಸ್ ನಿರೀಕ್ಷಿಸಿದಂತೆ ಅನರ್ಹರು ಜನತಾ ನ್ಯಾಯಾಲಯದಲ್ಲೂ ಅನರ್ಹಗೊಂಡರೆ ಮತ್ತೊಂದು ಸುತ್ತಿನ ರಾಜಕೀಯ ಅಸ್ಥಿರತೆ ಸೃಷ್ಟಿಯಾಗುವುದು ಅನಿ ವಾರ್ಯವಾಗಲಿದೆ.

2018ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷ ಪೂರ್ಣ ಬಹುಮತ ಪಡೆಯದಿದ್ದರೂ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಈ ಸಂದರ್ಭದಲ್ಲಿ ಕಾಂಗ್ರೆಸ್​ನ ಚತುರ ನಡೆಯಿಂದ ಜೆಡಿಎಸ್ ಜತೆ ಸೇರಿ ಮೈತ್ರಿ ಸರ್ಕಾರ ರಚನೆಯಾಯಿತು. ಆದರೆ, ಈ ಮೈತ್ರಿ ಸರ್ಕಾರ ಆರಂಭದಿಂದಲೂ ಅನಿಶ್ಚಿತತೆ ಹೊದ್ದುಕೊಂಡೇ ಸಾಗಿಬಂದು ಜುಲೈನಲ್ಲಿ ಅಂತ್ಯಕಂಡಿತು.

2018ರ ಮೇನಿಂದಲೂ ಇದ್ದ ರಾಜಕೀಯ ಗೊಂದಲ ಆಡಳಿತ ಯಂತ್ರದ ಮೇಲೂ ಗಾಢ ಪರಿಣಾಮ ಬೀರಿದ್ದು ಸುಳ್ಳಲ್ಲ. ಈ ಫಲಿತಾಂಶ ರಾಷ್ಟ್ರೀಯ ಬಿಜೆಪಿಗೂ ಮಹತ್ವದ್ದು. ವಿವಿಧ ಕಾರಣಗಳಿಂದ ಒಂದೊಂದೇ ರಾಜ್ಯ ಕಳೆದುಕೊಂಡಿರುವ ಬಿಜೆಪಿಗೆ ಕರ್ನಾಟಕದಲ್ಲಿ ಈ ಸರ್ಕಾರ ಉಳಿಸಿಕೊಂಡರೆ ಸಹಜವಾಗಿ ಆತ್ಮವಿಶ್ವಾಸ ಬಲಗೊಳ್ಳಲಿದೆ. ಈ ಕಾರಣಕ್ಕೆ ಪಕ್ಷದ ವರಿಷ್ಠರು ಇತ್ತ ಚಿತ್ತ ಹರಿಸಿದ್ದಾರೆ.

ರಾಜಕೀಯ ಲೆಕ್ಕಾಚಾರ

1. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ 207 ಸದಸ್ಯ ಬಲವಿದ್ದು, ಚುನಾವಣೆ ಫಲಿತಾಂಶದ ಬಳಿಕ ಈ ಸಂಖ್ಯೆ 222 ಆಗಲಿದೆ. ಈ ಹಂತದಲ್ಲಿ ಮ್ಯಾಜಿಕ್ ನಂಬರ್ 112 ಆಗಲಿದೆ.

2. ಬಿಜೆಪಿ ಸರ್ಕಾರ ಕನಿಷ್ಠ 6 ಸ್ಥಾನ ಗಳಿಸಿದರೂ ತಾತ್ಕಾಲಿಕವಾಗಿ ಸೇಫ್. ಒಂದು ವೇಳೆ ಈ ಗುರಿ ಮುಟ್ಟಲಾಗದಿದ್ದರೆ ಮತ್ತೊಂದು ಸುತ್ತಿನ ಆಪರೇಷನ್ ಅನಿವಾರ್ಯ.

3. ಆಡಳಿತಾರೂಢ ಬಿಜೆಪಿ ಬಲ 111ಕ್ಕಿಂತ ಕಡಿಮೆಯಾದರೆ ಬಿಎಸ್ಪಿ ಶಾಸಕ ಮಹೇಶ್ ಪ್ರಮುಖ ಪಾತ್ರ ವಹಿಸುತ್ತಾರೆ. ಜತೆಗೆ ಜೆಡಿಎಸ್ ಬೆಂಬಲ ಪಡೆದುಕೊಳ್ಳಲು ಪ್ರಯತ್ನಿಸಲೂಬಹುದು.

4. ಕಾಂಗ್ರೆಸ್- ಜೆಡಿಎಸ್ ಒಟ್ಟು 11ಕ್ಕಿಂತ ಹೆಚ್ಚು ಸ್ಥಾನ ಗಳಿಸಿ, ಮೈತ್ರಿ ಖಚಿತವಾದರೆ ಬಿಎಸ್​ವೈ ರಾಜೀನಾಮೆ ಕೊಡಬೇಕಾಗಬಹುದು. ಹೊಸ ಸರ್ಕಾರದ ರಚನೆ ಪ್ರಾರಂಭವಾಗಬಹುದು.

ಸಿಎಂ ಮುಂದಿದೆ 10 ಸವಾಲುಗಳು

ಉಪಚುನಾವಣೆ ಫಲಿತಾಂಶದ ಬಳಿಕ ಮುಖ್ಯಮಂತ್ರಿಗೆ ದೊಡ್ಡ ಸವಾಲುಗಳು ಎದುರಾಗಲಿವೆ. ಬಿ.ಎಸ್. ಯಡಿಯೂರಪ್ಪ ನಿರೀಕ್ಷಿಸಿದಂತೆ 12-13 ಸ್ಥಾನ ಗಳಿಸಿದರೆ ಅವರು ರಾಜಕೀಯವಾಗಿ ಬಲಿಷ್ಠವಾಗುತ್ತಾರೆ. ಜತೆಗೆ ಅವರು ಒಂದಷ್ಟು ಕಠಿಣ ಸವಾಲನ್ನೂ ಕರಗಿಸುವ ಅನಿವಾರ್ಯತೆಗೆ ಸಿಲುಕುತ್ತಾರೆ.

1. ಸರ್ಕಾರದ್ದು ಕತ್ತಿ ಮೇಲಿನ ನಡಿಗೆ ಎಂದು ಅರಿತಿದ್ದ ಜನತೆ ಸಹಜವಾಗಿ ತಮ್ಮ ನಿರೀಕ್ಷೆಗಳನ್ನು ತಾಳ್ಮೆಯಿಂದ ಅದುಮಿಟ್ಟುಕೊಂಡಿದ್ದರು. ಈಗ ಜನರ ನಿರೀಕ್ಷೆ ಅರಿಯಬೇಕಿದೆ.

2. ಪ್ರಮುಖವಾಗಿ ಆಡಳಿತ ಯಂತ್ರದಲ್ಲಿ ಚುರುಕು ತರುವ ಜವಾ ಬ್ದಾರಿ ಸಿಎಂ, ಮಂತ್ರಿಮಂಡಲದ ಮೇಲಿರಲಿದೆ. ರಾಜಕೀಯ ಅಸ್ಥಿರತೆಯಿಂದ ಸರ್ಕಾರಿ ವ್ಯವಸ್ಥೆ ಕೂಡ ಮುರುಟಿದೆ.

3. ನೆರೆ ಪೀಡಿತ 22 ಜಿಲ್ಲೆಗಳ ಸಂತ್ರಸ್ತರಿಗೆ ಪೂರ್ಣ ಆರ್ಥಿಕ ನೆರವು ಸಿಕ್ಕಿಲ್ಲ. ಸಾವಿರಾರು ಜನ ಇನ್ನೂ ಅತಂತ್ರ ಸ್ಥಿತಿಯಲ್ಲೇ ಇದ್ದಾರೆ. ಆದ್ಯತೆ ಮೇಲೆ ಅವರ ಸಹಾಯಕ್ಕೆ ಧಾವಿಸಬೇಕಿದೆ.

4. ಸಂಪುಟ ಪುನಾರಚನೆ ಮಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ. ಅರ್ಹತೆ ಹೊಂದಿದ ಅನರ್ಹರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದೊಳಗೆ ಬಿಕ್ಕಟ್ಟು ತಲೆದೋರದಂತೆ ನೋಡಬೇಕಿದೆ.

5. ವಸತಿ ಯೋಜನೆ ಸರ್ಕಾರದ ದೊಡ್ಡ ಸವಾಲು, ಹಾಕಿಕೊಂಡ ಗುರಿ ಮುಟ್ಟಲಾಗುತ್ತಿಲ್ಲ. ಹೀಗಾಗಿ ವಿಶೇಷ ಆದ್ಯತೆ ನೀಡಿ, ಸುಧಾರಣೆ ಕ್ರಮ ತಂದು ಫಲಾನುಭವಿಗಳಿಗೆ ಯೋಜನೆ ತಲುಪಿಸಬೇಕಿದೆ.

6. ಕೇಂದ್ರದಿಂದ ನಿರೀಕ್ಷಿತ ಮಟ್ಟದಲ್ಲಿ ನೆರವು ಸಿಗುತ್ತಿಲ್ಲ. ಹೀಗಾಗಿ ಕೇಂದ್ರದೊಂದಿಗೆ ಸಂಬಂಧ ಸುಧಾರಿಸಿಕೊಂಡು ಹೆಚ್ಚಿನ ಅನುದಾನಗಳನ್ನು ತರಬೇಕಿದೆ.

7. ಬಂಡವಾಳ ಬಂದಷ್ಟೂ ಉದ್ಯೋಗ ಸೃಷ್ಟಿ ಹೆಚ್ಚಾಗಲಿದೆ. ಹೀಗಾಗಿ ಬಂಡವಾಳ ತರಲು ವಿಶೇಷ ಪ್ರಯತ್ನ ಮಾಡಬೇಕಾಗಿದೆ. ವಿದೇಶಿ ಬಂಡವಾಳ ಸೆಳೆಯುವಲ್ಲಿ ಆಸ್ಥೆ ವಹಿಸಬೇಕಿದೆ.

8. ಬೆಂಗಳೂರು ಮೂಲಸೌಕರ್ಯಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಯೋಜನೆಗಳ ಅನುಷ್ಠಾನಕ್ಕೆ ವೇಗ ಕೊಡಬೇಕಿದೆ. ಹಣಕಾಸನ್ನು ಹೊಂದಿಸುವಲ್ಲಿ ಪ್ರಯತ್ನಗಳು ಹೆಚ್ಚಾಗಬೇಕಾಗಿದೆ.

9. ಜಿಂದಾಲ್​ಗೆ ಭೂಮಿ ಹಂಚಿಕೆ, ಟಿಪ್ಪು ಪಠ್ಯ ಮುಂತಾದ ಕಗ್ಗಂಟನ್ನು ಹೆಚ್ಚು ಗೊಂದಲ ಮಾಡಿಕೊಳ್ಳದೇ ಬಿಡಿಸಿಕೊಂಡು ಹೊರಬರಬೇಕಿದೆ.

10. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನ ಹಾಕಬೇಕು. ಅದರಲ್ಲೂ ನೀರಾವರಿ ಯೋಜನೆಗಳ ಬಗ್ಗೆ ಆದ್ಯತೆ ಕೊಡಬೇಕಿದೆ.

ಫಲಿತಾಂಶದ ಬಗ್ಗೆ ಚಿಂತೆ ಇಲ್ಲ, ನೆಮ್ಮದಿ ಯಾಗಿಯೇ ಇದ್ದೇವೆ. ಕಾಂಗ್ರೆಸ್, ಜೆಡಿಎಸ್ ಹೆಚ್ಚೆಂದರೆ ಒಂದೊಂದು ಸ್ಥಾನ ಮಾತ್ರ ಗೆಲ್ಲಬಹುದು. ಉಳಿದ 13 ಸ್ಥಾನಗಳಲ್ಲಿ ನಮ್ಮ ಪಕ್ಷವೇ ಗೆಲ್ಲಲಿದೆ. ನಮ್ಮ ಸರ್ಕಾರ ಮೂರೂವರೆ ವರ್ಷವೂ ಮುಂದುವರಿಯಲಿದೆ.

| ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ 

ಕಾಂಗ್ರೆಸ್​ ಮುಕ್ತ ಭಾರತ ಮಾಡ್ತೀನಿ ಅಂದವರು ನಿಧಾನವಾಗಿ ಒಂದೊಂದೇ ರಾಜ್ಯಗಳಲ್ಲಿ ಕಣ್ಮರೆಯಾಗುತ್ತಿದ್ದಾರೆ. ದೇಶದ ಜನಕ್ಕೆ ಯಾರು ತಮ್ಮ ಹಿತ ಕಾಯುವವರು ಎಂದು ಕ್ರಮೇಣ ಅರ್ಥವಾಗುತ್ತಿದೆ. ಉಪಚುನಾವಣೆಯಲ್ಲಿ 8 ಸ್ಥಾನ ಗೆಲ್ಲುತ್ತೇವೆ.

| ಸಿದ್ದರಾಮಯ್ಯ

ಪ್ರತಿಪಕ್ಷ ನಾಯಕ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...