

ಕೋಟ: ಸ್ವಚ್ಛತೆ ಪ್ರತಿಯೊಬ್ಬರಲ್ಲೂ ಜಾಗೃತಗೊಂಡಾಗ ಪರಿಸರ ಉಳಿಸಿ ಬೆಳೆಸಲು ಸಾಧ್ಯ. ಈ ದಿಸೆಯಲ್ಲಿ ಪಂಚವರ್ಣ ನಿರಂತರ ಅಭಿಯಾನ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಲಿದೆ ಎಂದು ಕುಂದಾಪುರ ವಕೀಲರ ಸಂಘ ಅಧ್ಯಕ್ಷ ಎಚ್.ಪ್ರಮೋದ್ ಹಂದೆ ಹೇಳಿದರು.
ಕೋಟ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲ ನೇತೃತ್ವದಲ್ಲಿ ಕೋಟತಟ್ಟು ಗ್ರಾಪಂ, ಆಶ್ರೀತ್ ಸಮೂಹ ಶಿಕ್ಷಣ ಸಂಸ್ಥೆ ಕೋಟ, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ ಸಹಯೋಗದೊಂದಿಗೆ 246ನೇ ಪರಿಸರಸ್ನೇಹಿ ಅಭಿಯಾನ ಕೋಟತಟ್ಟು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋಟತಟ್ಟು ಗ್ರಾಪಂ ಸದಸ್ಯ ವಾಸು ಪೂಜಾರಿ, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಆಶ್ರೀತ್ ಸಮೂಹ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮಂಡಲ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರು. ಸಂಚಾಲಕಿ ಸುಜಾತಾ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.