More

  ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ಸೆರೆ

  ಬೆಂಗಳೂರು: ರಸ್ತೆಗಳಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರು ಯುವಕರ ವಿರುದ್ಧ ಕೆಂಗೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
  ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ನಗರ ಸಂಚಾರ ಪಶ್ಚಿಮ ವಿಭಾಗದ ಕೆಂಗೇರಿ ಸಂಚಾರ ಠಾಣೆ ಪೊಲೀಸರು, ಮಾ.೧೭ರಂದು ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರು ಯುವಕರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
  ಈ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದ್ದು, ವ್ಹೀಲಿಂಗ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ.ಹದ್ದಣ್ಣನವರ್ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts