

ಸುಳ್ಯ: ನಗರದ ಬೊಳುಬೈಲು ಸಮೀಪ ಮಾಣಿ ಮೈಸೂರು ಹೆದ್ದಾರಿಯಲ್ಲಿ ಕಾಸರಗೋಡಿನಿಂದ ಸುಳ್ಯದತ್ತ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ಕಾರಿನಲ್ಲಿ ಚಾಲಕ ಸೇರಿ ಮೂವರಿದ್ದು, ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಳಿಕ ಸ್ಥಳೀಯರು ಕಾರನ್ನು ಮೇಲಕ್ಕೆತ್ತಿದ್ದಾರೆ.