ಪಂಚವರ್ಣದಿಂದ ಪ್ರಕೃತಿಯ ಕಾಳಜಿ ಶ್ಲಾಘನೀಯ

environment
ಪರಿಸರಸ್ನೇಹಿ ಹಸಿರು ಜೀವ ಅಭಿಯಾನದಲ್ಲಿ ಯಕ್ಷಗುರು ಎಂ.ಎನ್.ಮಧ್ಯಸ್ಥ ಗಿಡ ವಿತರಿಸಿದರು.
Published on

ಕೋಟ: ಕೋಟದ ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಅವರ ಪರಿಸರ ಕಾಳಜಿ ಆಂದೋಲನ ಮನೆ ಮನಗಳನ್ನು ತಲುಪುತ್ತಿದೆ ಇದು ಅಭಿನಂದನೀಯ ಎಂದು ಶಿಕ್ಷಣ ತಜ್ಞ, ಯಕ್ಷಗುರು ಎಂ.ಎನ್.ಮಧ್ಯಸ್ಥ ಅಭಿಪ್ರಾಯಪಟ್ಟರು.

ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ ಸಹಯೋಗದೊಂದಿಗೆ ಹಾಲು ಉತ್ಪಾದಕರ ಸಹಕಾರಿ ಸಂಘ ಮಣೂರು ಸಂಯೋಜನೆಯೊಂದಿಗೆ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಅನ್ನಪೂರ್ಣ ನರ್ಸರಿ ಪೇತ್ರಿ ಕೊಡ ಮಾಡಿದ ಗಿಡಗಳನ್ನು ನೆಡುವ 259ನೇ ಭಾನುವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನದಲ್ಲಿ ಗಿಡ ವಿತರಿಸಿ ಮಾತನಾಡಿದರು.

ಸ್ಥಳೀಯ ಗ್ರಾಮಸ್ಥರಿಗೆ ವಿವಿಧ ತಳಿಗಳ ಗಿಡಗಳನ್ನು ವಿತರಿಸಲಾಯಿತು. ಕೋಟ, ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 50ಕ್ಕೂ ಅಶೋಕ ಗಿಡ ನಾಟಿ ಮಾಡಲಾಯಿತು.

ಮಣೂರು ಮಹಾಲಿಂಗೇಶ್ವರ ದೇಗುಲ ಅಧ್ಯಕ್ಷ ಸತೀಶ್ ಎಚ್.ಕುಂದರ್, ಉದ್ಯಮಿ ತೆಕ್ಕಟ್ಟೆ ಅನಂತ ನಾಯಕ್, ಕೋಟ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಅಧ್ಯಕ್ಷ ಎಂ.ಸುಬ್ರಾಯ ಆಚಾರ್, ಕೋಟ ಕಾಶೀಮಠದ ದೇವದತ್ತ ಭಟ್, ಟ್ರಾವೆಲಿಂಕ್ಸ್ ಫ್ರೆಂಡ್ಸ್ ಗೌರವಾಧ್ಯಕ್ಷ ನಾಗರಾಜ್ ಅಮೀನ್, ಹಿರಿಯ ಕೃಷಿಕರಾದ ರವಿ ಮಯ್ಯ, ರವೀಂದ್ರ ಶೆಟ್ಟಿ ದ್ಯಾವಸ, ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಸಿಇಒ ಹರ್ಷ ಪೂಜಾರಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಉಪಸ್ಥಿತರಿದ್ದರು.

ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿ. ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿ, ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net