More

    ಕೇಂದ್ರ ಅತಿ ಕಡಿಮೆ ಪ್ರಮಾಣದ ಪರಿಹಾರ ಬಿಡುಗಡೆ ಮಾಡಿದೆ

    ಮೈಸೂರು: ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 3,454 ಕೋಟಿ ರೂ. ಮಾತ್ರ ಬರ ಪರಿಹಾರ ಬಿಡುಗಡೆಗೊಳಿಸಿದ್ದು, ಹೆಚ್ಚಿನ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ನ್ಯಾಯಾಲಯದಲ್ಲಿನ ಹೋರಾಟ ಮುಂದುವರಿಸಬೇಕು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

    ರಾಜ್ಯ ಸರ್ಕಾರ 18 ಸಾವಿರ ಕೋಟಿ ರೂ. ಬರ ಪರಿಹಾರ ನೀಡುವಂತೆ ಕೋರಿತ್ತು. ಆದರೆ, ಕೇಂದ್ರ ಈಗ ಭಿಕ್ಷೆ ರೂಪದಲ್ಲಿ ಪರಿಹಾರ ನೀಡಿದೆ. ಕೇಂದ್ರದ ಎನ್‌ಡಿಆರ್‌ಎಫ್ ಮಾನದಂಡದ ಅಡಿಯಲ್ಲಿ ಪರಿಹಾರ ಕೇಳಲಾಗಿತ್ತು. ಆದರೆ ಕೇಂದ್ರ ಅತಿ ಕಡಿಮೆ ಪ್ರಮಾಣದ ಪರಿಹಾರ ಬಿಡುಗಡೆ ಮಾಡಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

    ಬಿಜೆಪಿಯ ರೈತ ವಿರೋಧಿ ಧೋರಣೆ ಖಂಡಿಸಿ ರಾಜ್ಯ ರೈತ ಸಂಘ ಚುನಾವಣೆ ವೇಳೆ ಬಿಜೆಪಿ ಮೈತ್ರಿ ಪಕ್ಷ ಸೋಲಿಸಿ, ರೈತರನ್ನು ಉಳಿಸಿ ಎಂಬ ಅಭಿಯಾನ ಹಮ್ಮಿಕೊಂಡಿದೆ. ಇದರ ಅಂಗವಾಗಿ ಮೊದಲನೇ ಹಂತದ ಚುನಾವಣೆ ವೇಳೆ ಸುಮಾರು ಶೇ.4 ರಷ್ಟು ರೈತರ ಮತಗಳು ಮೈತ್ರಿ ಪಕ್ಷ ವಿರುದ್ಧವಾಗಿ ಚಲಾವಣೆ ಆಗಿರುವ ಸಾಧ್ಯತೆ ಇದೆ. ಇದೇ ರೀತಿ ಎರಡನೇ ಹಂತದಲ್ಲಿಯೂ ಉತ್ತರ ಕರ್ನಾಟಕದಲ್ಲಿಯೂ ರೈತ ಸಂಘ ಅಭಿಯಾನ ಮುಂದುವರಿಸಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts