More

    ರೈತರನ್ನು ಕಡೆಗಣಿಸಿದ ಕೇಂದ್ರ ಸರ್ಕಾರ

    ವಿಜಯವಾಣಿ ಸುದ್ದಿಜಾಲ ಧಾರವಾಡ
    ಕೇಂದ್ರ ಸರ್ಕಾರ ಹತ್ತು ವರ್ಷದ ಅವಧಿಯಲ್ಲಿ ರೈತರನ್ನು ಕಡೆಗಣಿಸಿದೆ. ಬಿಜೆಪಿ ಆಡಳಿತ ಅವಧಿಯಲ್ಲೇ ದೇಶದಲ್ಲಿ 1.74 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾನವ ಬಂಧುತ್ವ ವೇದಿಕೆ ಸಂಚಾಲಕ ಡಾ. ಎನ್​. ಅನಂತ ನಾಯಕ ದೂರಿದರು.
    ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಸಂ ಪರಿವಾರದವರಿಗೆ ಸಂವಿಧಾನ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಆ ಪಕ್ಷದ ನಾಯಕರು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಾರೆ. ಸಂವಿಧಾನ ರಸುವ ಪಕ್ಷಕ್ಕೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.
    ದೇಶದಲ್ಲಿ ಶೇ. 52ರಷ್ಟು ಯುವಕರಿದ್ದಾರೆ. ಕಳೆದ ಚುನಾವಣೆ ಪ್ರಣಾಳಿಕೆಯಲ್ಲಿ ಕೌಶಲ ತರಬೇತಿ, ವಾಷಿರ್ಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ ಈವರೆಗೆ ಹೇಳಿದಷ್ಟು ಉದ್ಯೋಗ ನೀಡಿಲ್ಲ. ಕೇಂದ್ರ ಸರ್ಕಾರ ವಿಮಾನ, ರೈಲ್ವೆ ನಿಲ್ದಾಣಗಳು ಸೇರಿ ಅನೇಕ ಸರ್ಕಾರಿ ಕಂಪನಿಗಳನ್ನು ಖಾಸಗೀಕರಣಗೊಳಿಸಿದೆ. ಇದರಿಂದ ಯುವ ಜನತೆ ನಿರುದ್ಯೋಗಿಗಳಾಗಿದ್ದಾರೆ. ಇದು ದೇಶದ ಅಭಿವೃದ್ಧಿಗೆ ಮಾರಕ ಎಂದು ಆರೋಪಿಸಿದರು.
    ಮುಂಡರಾದ ಕೆ.ಎಂ. ರಾಮಚಂದ್ರಪ್ಪ, ಬಸವರಾಜ, ಸುಬ್ಬಣ್ಣ, ರವಿಕುಮಾರ, ಸುಭಾಷ ಪಾಟೀಲ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts