ಹಗರಿಬೊಮ್ಮನಹಳ್ಳಿ: ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆಮಾಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಬಳ್ಳಾರಿ ಸಂಸದ ಈ.ತುಕಾರಾಂ ಆರೋಪಿಸಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ಆಯೋಜಿಸಿದ್ದ, ಜಿಲ್ಲಾ ತ್ರೈಮಾಸಿಕ ದಿಶಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಹಾರಾಷ್ಟ್ರ ಬಿಟ್ಟರೆ, ಕರ್ನಾಟಕದಿಂದ 4 ಲಕ್ಷ 50ಸಾವಿರ ಕೋಟಿ ರೂ. ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ಹೋಗುತ್ತಿದೆ. ಆದರೆ, ಕೇಂದ್ರದಿಂದ 56 -65ಸಾವಿರ ಕೋಟಿ ರೂ.ಮಾತ್ರ ನೀಡಲಾಗುತ್ತಿದೆ. ಇದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ.
ಆಂಧ್ರ ಮತ್ತು ಬಿಹಾರ್‌ಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ. ರಾಜ್ಯದ ಕಾಂಗ್ರೆಸ್ ಸಂಸದರಿಂದ ಹೆಚ್ಚಿನ ಅನುದಾನಕ್ಕೆ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ರೈಲು ಸಂಚರಿಸುವ ರಾಜ್ಯ ಹೆದ್ದಾರಿಗಳಲ್ಲಿ ಪ್ಲೈ ಓವರ್‌ಗಳ ನಿರ್ಮಾಣ ಕಾರ್ಯ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಹೊಸ ರಸ್ತೆಗಳ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗುವುದು. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳಾದರೆ, ಕೂಡಲೇ ಆಂಬುಲೆನ್ಸ್‌ಗಳ ವ್ಯವಸ್ಥೆ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.