ಸಮ್ಮಿಶ್ರ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸ ಕಷ್ಟ: ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ: ಕಳೆದ ಸರ್ಕಾರದಲ್ಲಿ ಅಭಿವೃದ್ಧಿ ಮಾಡುವ ಮೂಲಕ ನಾನು ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೆ. ಆದರೆ ಈ ಸರ್ಕಾರದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎಂದು ವಿಜಯಪುರದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗ ಸಮ್ಮಿಶ್ರ ಸರ್ಕಾರ ಇರುವುದರಿಂದ ಕಳೆದ ಬಾರಿಯಷ್ಟು ಅಭಿವೃದ್ಧಿ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಇಂಡಿ ಹುಟ್ಟಿದಾಗಿನಿಂದ ಯಾವುದೇ ಸ್ಥಾನಮಾನ ಸಿಕ್ಕಿಲ್ಲ. ಇಂಡಿಯಲ್ಲಿ ಮೆಗಾ ಮಾರ್ಕೆಟ್​ ನಿರ್ಮಾಣ ವಾಗಬೇಕು. ಎಂದೋ ಆಗಬೇಕಿದ್ದ ವಿಮಾನ ನಿಲ್ದಾಣ ಇದುವರೆಗೂ ಆಗಿಲ್ಲ. ನೀರಾವರಿ ಯೋಜನೆಗಳೂ ಬಾಕಿ ಉಳಿದಿವೆ. ಹೆದ್ದಾರಿ ಕಾಮಗಾರಿ ಆರಂಭವಾಗಬೇಕು ಎಂದು ಹೇಳಿದರು.