

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಸಮಾಜವನ್ನು ಗಟ್ಟಿ ಮಾಡುವ ಜತೆಗೆ ಗ್ರಾಮಿಣ ಪ್ರದೇಶದ ಜನರಿಗೆ ಶಕ್ತಿ ನೀಡುವ ಸತ್‌ಚಿಂತನೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆರಂಭಿಸಿದ ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಜಗತ್ತಿಗೆ ಮಾದರಿಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರುಪಂಥ ವಲಯದ ಕಲ್ಲಕಟ್ಟನಿ ಹಾಗೂ ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದುಗ್ಗೇ ಗೌಡ ಮಾತನಾಡಿ, ಆರ್ಥಿಕ ಸಹಕಾರ ನೀಡುವ ಮೂಲಕ ಕೃಷಿಕರು ಬದುಕು ಕಟ್ಟಿಕೊಳ್ಳಲು ಹಾಕಿದ ಯೋಜನೆಯೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಕುಟುಂಬಗಳು ಅಭಿವೃದ್ಧಿ ಪಥದತ್ತ ಸಾಗುತ್ತಿವೆ ಎಂದರೆ ಎಲ್ಲ ಜಾತಿ ಮತ ಧರ್ಮವನ್ನು ಮೀರಿ ಸಮಾನವಾಗಿ ಕೊಂಡುಹೋಗುವ ಕೆಲಸ ಯೋಜನೆ ಮಾಡಿದೆ ಎಂದರು.
ಎಸ್‌ಎಸ್‌ಎಫ್ ಸಂಘಟನೆಯ ದ.ಕ.ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಸಿರಾಜುದ್ದೀನ್ ಸಕಾಫಿ ಕನ್ಯಾನ, ನವ ಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಸ್ಥಾಪಕ ಅಧ್ಯಕ್ಷ ದುಗ್ಗಪ್ಪ ಗೌಡ ಪೊಸಂದೋಡಿ, ಶ್ರೀ ಬ್ರಹ್ಮ ಬೈದರ್ಕಳ ಗರಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನೀಲ್ ಕುಮಾರ್ ಅಗರಿ, ಶ್ರೀ ಗುರು ನಾರಾಯಣ ಸೇವಾ ಸಂಘ ಬೇಳ್ತಂಗಡಿ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ತಣ್ಣೀರುಪಂಥ ಗ್ರಾಪಂ ಅಧ್ಯಕ್ಷೆ ಹೇಮಾವತಿ, ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಗ್ರಾಪಂ ಸದಸ್ಯ ಮಹಮ್ಮದ್ ನಿಝಾರ್ ಕುದ್ರಡ್ಕ, ಸಾಮ್ರಾಟ್ ಕರ್ಕೇರ, ಸದಾನಂದ ಶೆಟ್ಟಿ ಮಡಪ್ಪಾಡಿ, ನಿವೃತ್ತ ಪೊಲೀಸ್ ಅಧಿಕಾರಿ ನಾರಾಯಣ ಶೆಟ್ಟಿ ಮಡಪ್ಪಾಡಿ, ಶ್ರೀ ಮಹಮ್ಮಾಯಿ ದೇವಸ್ಥಾನ ದೇವಿನಗರ ತನ್ನೀರುಪಂಥ ಅಧ್ಯಕ್ಷ ಗಂಗಯ್ಯ ನಾಯ್ಕ, ಕರ್ಪಡಿ ವಲಯ ಅಧ್ಯಕ್ಷ ರಾಜಶೇಖರ್ ರೈ, ತಣ್ಣೀರುಪಂಥ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಶರೀಫ್, ತಣ್ಣೀರುಪಂಥ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಧನವತಿ, ನೂತನ ಅಧ್ಯಕ್ಷ ಹರೀಶ್ ಪೂಜಾರಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.
ರುದ್ರಗಿರಿ ಶ್ರೀ ಮೃತ್ಯಂಜಯ ದೇವಸ್ಥಾನ ತನ್ನೀರುಪಂಥ ಕಾರ್ಯದರ್ಶಿ ದೇಜಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ವಿಶ್ವನಾಥ್ ನಿರೂಪಿಸಿದರು. ಕಲ್ಲಕಟ್ಟನಿ ಒಕ್ಕೂಟದ ಅಧ್ಯಕ್ಷ ಪ್ರಭಾಕರ ಪೊಸೊಂದೊಡಿ ವಂದಿಸಿದರು.
ತಣ್ಣೀರುಪಂಥ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಲೋಲಾಕ್ಷಿ ವರದಿ ಮಂಡಿಸಿದರು. ಕಲ್ಲಕಟ್ಟನಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಕಲಾವತಿ ಸಹಕರಿಸಿದರು.
ಗುಂಪುಗಳ ಮೂಲಕ ಗ್ರಾಮೀಣ ಭಾಗದಲ್ಲಿರುವ ಜನರು ಕೂಡ ಸಮಾಜದ ಮುಖ್ಯವಾಹಿನಿಗೆ ಬಂದು ಗೌರವ ಪಡೆಯುತ್ತಿದ್ದಾರೆ. ಬಡವರು ಅನುಭವಿಸುತ್ತಿರುವ ಯಾತನೆಯನ್ನು ನಾವು ನೋಡಿದ್ದೇವೆ. ತನ್ನ ಮನೆ ತನ್ನ ಕುಟುಂಬವನ್ನು ಪ್ರತಿಯೊಬ್ಬರೂ ಬೆಳೆಸುತ್ತಾರೆ. ಆದರೆ ಪುಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬಡವರ ಮನೆ ಬೆಳಗುವ ಕೆಲಸ ಮಾಡುತ್ತಿದ್ದಾರೆ. - ಸಿರಾಜುದ್ದೀನ್ ಸಕಾಫಿ ಕನ್ಯಾನ, ಎಸ್‌ಎಸ್‌ಎಫ್ ಸಂಘಟನೆಯ ದ.ಕ.ಜಿಲ್ಲಾ ನಿಕಟಪೂರ್ವ ಅಧ್ಯಕ್ಷ https://www.vijayavani.net/jana-suraksha-camp-in-olamogru https://www.vijayavani.net/perfection-in-life-from-sports