ಹಗರಣಗಳಲ್ಲೇ ಮುಳುಗಿದ ಕಾಂಗ್ರೆಸ್ ಸರ್ಕಾರ

B.Y.Raghavendra

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಗರಣಗಳಲ್ಲೇ ಮುಳುಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೂರಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರವಾಗಿದೆ. ಇದೇ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಯನ್ನೂ ಬಲಿ ಪಡೆದಿದೆ. ಮೂಡಾ ಹಗರಣದಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಕುಟುಂಬ ಭಾಗಿಯಾಗಿದ್ದು ನಾಲ್ಕೂವರೆಯಿಂದ ಐದು ಸಾವಿರ ಕೋಟಿ ಅವ್ಯವಹಾರವಾಗಿದೆ ಎಂದರು.
ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವಿಗೆ ಅಲ್ಲಿನ ಕಾಂಗ್ರೆಸ್ ಶಾಸಕ ಮತ್ತು ಆತನ ಪುತ್ರ ಕಾರಣವಾಗಿದ್ದಾರೆಂಬ ಆರೋಪ ಕೇಳಿಬಂದಿದ್ದು ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಪ್ರತಿಪಕ್ಷವಾಗಿ ಬಿಜೆಪಿ-ಜೆಡಿಎಸ್ ಪಕ್ಷಗಳು ಮಾಡುತ್ತಿವೆ. ಆದರೆ ಇದನ್ನು ಸಹಿಸಿಕೊಳ್ಳದ ಮಧು ಬಂಗಾರಪ್ಪ ಪ್ರತಿಪಕ್ಷದವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕಳೆದ ಲೋಕಸಭಾ ಚುನಾವಣೆ ವೇಳೆ ಅಧಿಕಾರಿಗಳಿಗೆ ತೊಂದರೆ ಕೊಟ್ಟರು. ಶಿವಮೊಗ್ಗ ಜಿಲ್ಲೆಯಲ್ಲಿ ಟಾರ್ಗೆಟ್ ಮಾಡಿ ಅಧಿಕಾರಿಗಳ ವರ್ಗಾವಣೆ ಮಾಡಿದರು. ಕೇವಲ ಎ ಗ್ರೂಪ್ ನೌಕರರಷ್ಟೆ ಅಲ್ಲ. ಡಿ ಗ್ರೂಪ್ ನೌಕರರನ್ನೂ ವರ್ಗಾವಣೆ ಮಾಡಿದ್ದರು. ಇದೀಗ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ರೇಟ್ ಫಿಕ್ಸ್ ಕೂಡ ಮಾಡಲಾಗಿದೆ ಎಂದರು.

Share This Article

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ