More

    ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸುಭದ್ರವಾಗಿದೆ

    ಚಾಮರಾಜನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು, ಕಾರ್ಯಕರ್ತರು ಯಾವುದೇ ಊಹ ಪೋಹಗಳಿಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.


    ಶನಿವಾರ ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
    ತಾಲೂಕು ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಒಲವು ತೋರಿದ್ದು, ಈಗಾಗಲೇ ಅನುದಾನ ಸಹ ಬಿಡುಗಡೆಗೊಳ್ಳುತ್ತಿದೆ. ಅರ್ಧಕ್ಕೆ ನಿಂತಿರುವ ಭವನಗಳ ಕಾಮಗಾರಿಗಳಿಗೆ ಪೂರ್ಣಗೊಳಿಸುವುದು, ರಸ್ತೆಗಳ ದುರಸ್ತಿ ಸೇರಿದಂತೆ ಮೂಲಸೌಕರ್ಯಗಳಿಗೆ ಅನುದಾನ ಬಿಡುಗಡೆಯಾಗಿದೆ. ಬರ ನಿರ್ವಹಣೆಗೂ ಸಹ ಜನತೆಗೆ ತೊಂದರೆಯಾಗದಂತೆ ನೀರಿನ ವ್ಯವಸ್ಥೆ ಕಲ್ಪಿಸಲು ಈಗಾಗಲೇ ವ್ಯವಸ್ಥೆಗಳನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನವನ್ನು ತಾಲೂಕಿಗೆ ತರುವುದರುವ ಮೂಲಕ ಸಮಗ್ರ ಅಭಿವೃದ್ಧಿಗೆ ಹಾಗೂ ತಾಲೂಕಿನ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಮಾನವ ಪ್ರಾಣಿ ಸಂಘರ್ಷ ತಡೆಗಟ್ಟಲು ಒತ್ತು ನೀಡಲಾಗುವುದೆಂದು ತಿಳಿಸಿದರು.


    ಇದೇ ತಿಂಗಳಕ್ಕೆ 12ಕ್ಕೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದೇ (12,ಮಂಗಳವಾರ) ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಮಾಜಿ ಸಂಸದ ದಿ.ಆರ್ ಧ್ರುವನಾರಾಯಣ್ ಅವರ ಮೊದಲನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಸಮಾವೇಶ ಹಾಗೂ ಫಲಾನವಿಗಳ ಭೇಟಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ಮಂತ್ರಿಗಳು ಹಾಗೂ ಶಾಸಕರು ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಚಾಮರಾಜನಗರ ಪಟ್ಟಣದಲ್ಲಿ ನಡೆಯಲಿರುವ ಗ್ಯಾರಂಟಿಗಳ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

    ಹಾಗಾಗಿ, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಸಮಾವೇಶಕ್ಕೆ ಭಾಗವಹಿಸಬೇಕು. ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆ ತರಲು ಸರ್ಕಾರದಿಂದಲೇ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಎರಡು ಬಸ್‌ಗಳನ್ನು ನಿಯೋಜನೆ ಮಾಡಲಾಗಿದ್ದು, ಮಹಿಳಾ ಫಲಾನುಭವಿಗಳು ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.


    ಸಭೆಯಲ್ಲಿ ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಮಾಜಿ ಸಂಸದ ಎ.ಸಿದ್ದರಾಜು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೆ.ಎಸ್.ಮಹೇಶ್, ಪಿ.ಚನ್ನಪ್ಪ, ನವೀನ್ ಕೆರಹಳ್ಳಿ ಸೇರಿದಂತೆ ಹಲವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts