More

    ‘ಪ್ರಧಾನಿ ಮೋದಿ ಕಾಂಗ್ರೆಸ್​ಅನ್ನು ಎಷ್ಟು ಬೇಕಾದರೂ ಟೀಕಿಸಲಿ ಆದರೆ….’: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಗ್ರಾಮೀಣ ಪ್ರದೇಶದಲ್ಲಿರುವ ಜನರು ಎಂಜಿನರೇಗಾ ಯೋಜನೆ ಅಡಿ ಉದ್ಯೋಗ ಅರಸಿ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ವಿಧಾನಸಭೆ ಚುನಾವಣೆ ನಡೆಯುವ ರತಾಜ್ಯಗಳಲ್ಲಿ ಪ್ರಧಾನಿ ಮೋದಿ ತಮ್ಮ ಸರ್ಕಾರದ ವೈಫಲ್ಯಗಳನ್ನು ಮರೆಮಾಚಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಸರಿಯಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ರಾಜಸ್ಥಾನದ ಜೋಧಪುರದಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.

    ಇದನ್ನೂ ಓದಿ: ಏಷ್ಯನ್​ ಗೇಮ್ಸ್| ಬಾಂಗ್ಲಾದೇಶವನ್ನು ಮಣಿಸಿ ಫೈನಲ್​​ಗೆ ಲಗ್ಗೆ ಇಟ್ಟ ಭಾರತ ಕ್ರಿಕೆಟ್ ತಂಡ

    ಪ್ರಧಾನಿ ಮೋದಿ ಎಷ್ಟು ಬೇಕಾದರೂ ಕಾಂಗ್ರೆಸ್​ ಪಕ್ಷವನ್ನು ಟೀಕಿಸಲಿ. ಆದರೆ, ಯಾವುದೇ ಕಾರಣಕ್ಕೂ ಬಡವರ ಹಕ್ಕುಗಳನ್ನು ಕಸಿದುಕೊಳ್ಳಬಾರದು. ಆದಾಯ ಕುಸಿತ ಹಾಗೂ ಹಣದುಬ್ಬರದಿಂದಾಗಿ ಎಂಜಿನರೇಗಾಗೆ ಹೆಚ್ಚಿನ ಬೇಡಿಕೆ ಇದ್ದರೂ ಸಹ ಜನರು ಉದ್ಯೋಗಕ್ಕಾಗಿ ಮನೆಯಿಂದ ಮನೆಗೆ ಅಲೆದಾಡಬೇಕಿದೆ.

    ಗ್ರಾಮೀಣ ಪ್ರದೇಶಗಳಲ್ಲಿ ಎಂಜಿನರೇಗಾಗೆ ಕಳೆದ ನಾಲ್ಕು ವರ್ಷಗಳಲ್ಲಿ ಶೇ. 302ರಷ್ಟು ಏರಿಕೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಬಿಕ್ಕಟ್ಟು ಆಳವಾಗಿ ಬೇರೂರಿದ್ದು, ಪ್ರಧಾನಿ ಮೋದಿ ಇಂತಹ ಸಮಸ್ಯೆಗಳ ಬಗ್ಗೆ ಗಮನ ಹರಿಸದೆ ಕಾಂಗ್ರೆಸ್​ ಪಕ್ಷವನ್ನು ಟೀಕಿಸುತ್ತ ಓಡಾಡುತ್ತಿದ್ದಾರೆ. 2023ರ ಆಯವ್ಯದಲ್ಲಿ ಕೇಂದ್ರ ಸರ್ಕಾರವು ಎಂಜಿ ನರೇಗಾಗೆ ನೀಡುತ್ತಿದ್ದ ಅನುದಾನದಲ್ಲಿ ಶೇ.33ರಷ್ಟು ಕಡಿತಗೊಳಿಸಿದೆ. ಇದರಿಂದ ಅನೇಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯೋತ್ಸವ ರಸಪ್ರಶ್ನೆ - 23

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts