More

    ಭಾರತೀಯತೆ ಸಾರುವುದೇ ಸಂವಿಧಾನ

    ಬಾಳೆಹೊನ್ನೂರು: ಭಾರತೀಯತೆ ಸಾರುವುದೇ ಸಂವಿಧಾನ ಎಂದು ಬನ್ನೂರು ಗ್ರಾಮದ ಶ್ರೀಕಾಂತ್ ಹೇಳಿದರು.

    ಬುಧವಾರ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ಸ್ವಾಗತಿಸಿ ಮಾತನಾಡಿ, ದೇಶದಲ್ಲಿ ಸಂವಿಧಾನ ಜಾರಿಗೆ ಬರುವ ಮೊದಲು ಕೆಲವು ನಿಗದಿತ ಕೆಲಸಗಳನ್ನು ಆಯಾ ಜನಾಂಗದವರೇ ನಿರ್ವಹಿಸಬೇಕಿತ್ತು. ಸಂವಿಧಾನ ಜಾರಿಗೆ ಬಂದ ನಂತರ ಎಲ್ಲರಿಗೂ ಸಮಾನ ಹಕ್ಕು ದೊರೆತಿದೆ. ಎಲ್ಲ ಜಾತಿ, ಧರ್ಮ, ವರ್ಗದವರಿಗೂ ಸಮಾನ ಹಕ್ಕು ನೀಡಲಾಗಿದೆ. ಸಂವಿಧಾನ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯುವಜನರು ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳಬೇಕು ಎಂದರು.
    ಎನ್.ಆರ್.ಪುರ ತಹಸೀಲ್ದಾರ್ ತನುಜಾ ಟಿ. ಸವದತ್ತಿ ಮಾತನಾಡಿ, ಸಂವಿಧಾನ ಜಾಗೃತಿ ಜಾಥಾ ತಾಲೂಕಿನಲ್ಲಿ ಮೂರು ದಿನಗಳ ಕಾಲ ಸಂಚರಿಸಲಿದೆ ಎಂದು ತಿಳಿಸಿದರು.
    ಸಂವಿಧಾನ ರಥವನ್ನು ರೋಟರಿ ವೃತ್ತದ ಬಳಿ ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಎಂ.ವಿ.ಸದಾಶಿವ ಆಚಾರ್ಯ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು. ಬಳಿಕ ಪಟ್ಟಣದ ಮುಖ್ಯರಸ್ತೆಯಲ್ಲಿ ನಾಸಿಕ್ ಡೋಲು, ಪಟಾಕಿ ಪ್ರದರ್ಶನದೊಂದಿಗೆ ಮೆರವಣಿಗೆ ಮಾಡಲಾಯಿತು.
    ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ್, ಗ್ರಾಪಂ ಉಪಾಧ್ಯಕ್ಷೆ ರಂಜಿತಾ, ಸದಸ್ಯರಾದ ಎಂ.ಎಸ್.ಅರುಣೇಶ್, ರವಿಚಂದ್ರ, ಇಬ್ರಾಹಿಂ ಶಾಫಿ, ಜಾನಕಿ, ಅಂಬುಜಾ, ಶೇಖರ್, ಶಿವಪ್ಪ, ಜಯಂತಿ, ಸಿಸಿಲಿಯಾ ೆರ್ನಾಂಡಿಸ್, ಜಾನ್ ಡಿಸೋಜಾ, ಪಿಡಿಒ ಕಾಶಪ್ಪ, ಕಾರ್ಯದರ್ಶಿ ರಾಮಪ್ಪ, ಸಂಪೂರ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts