

ಪಡುಬಿದ್ರಿ: ವಿಶ್ವಕರ್ಮ ದೇವರು ಸಮಸ್ತ ಬ್ರಹ್ಮಾಂಡದ ನಿರ್ವಾತೃಗಳು. ಭಾರತದ ಶ್ರೀಮಂತ ಸಾಂಸ್ಕತಿಕ ಪರಂಪರೆ ಪ್ರತಿಬಿಂಬಿಸುವಲ್ಲಿ ವಿಶ್ವಕರ್ಮರ ಕೊಡುಗೆ ಅಪಾರ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿಪ್ರಾಯಪಟ್ಟರು.
ಕಾಪು ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕುಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ ಉದ್ಘಾಟಿಸಿ ವಾತನಾಡಿದರು.
ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಠದ ದಿವಾನ ಐ.ಲೋಲಾಕ್ಷ ಶರ್ಮ ಧಾರ್ಮಿಕ ಉಪನ್ಯಾಸ ನೀಡಿದರು. ನಟ ಶಶಿ ಆಚಾರ್ಯ ಕುತ್ಯಾರು ಅವರನ್ನು ಸನ್ಮಾನಿಸಲಾಯಿತು.
ಕಾಪು ಪ್ರಭಾರ ತಹಸೀಲ್ದಾರ್ ಪ್ರದೀಪ್ ಆರ್., ತಾಪಂ ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ್ ಆಚಾರ್ಯ ಕಾಪು, ಪ್ರಮುಖರಾದ ಶಿಲ್ಪಿ ಗಣಪತಿ ಆಚಾರ್ಯ, ಮಧು ಆಚಾರ್ಯ, ಸುಧಾಕರ ಆಚಾರ್ಯ, ಗಣಪತಿ ಆಚಾರ್ಯ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುವಾರ್ ಉಪಸ್ಥಿತರಿದ್ದರು. ವೈ.ಗಣೇಶ್ ಆಚಾರ್ಯ ಉಚ್ಚಿಲ ಸ್ವಾಗತಿಸಿದರು. ರಾವೇಂದ್ರ ಆಚಾರ್ಯ ಕೈಪುಂಜಾಲು ವಂದಿಸಿದರು. ರಾಜೇಶ್ ಆಚಾರ್ಯ ಬಿಳಿಯಾರು ಕಾರ್ಯಕ್ರಮ ನಿರೂಪಿಸಿದರು.