More

    ರಾಜ್ಯದಲ್ಲಿ ಕರೊನಾ ಪಾಸಿಟಿವ್ ಪ್ರಮಾಣ ದೇಶದಲ್ಲಿಯೇ ಅತ್ಯಂತ ಕಡಿಮೆ

    ಹಾಸನ: ರಾಜ್ಯದಲ್ಲಿ ಕರೊನಾ ಪರೀಕ್ಷೆಗೆ ಒಳಗಾದವರಲ್ಲಿ ಪಾಸಿಟಿವ್ ವರದಿ ದೃಢಪಡುತ್ತಿರುವವರ ಪ್ರಮಾಣ ಇಡೀ ದೇಶದಲ್ಲಿಯೇ ಅತ್ಯಂತ ಕಡಿಮೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಸುಧಾಕರ್ ಹೇಳಿದ್ದಾರೆ.

    ಹಾಸನದಲ್ಲಿ ಇಂದು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇದುವರೆಗೆ 3,04,816 ಮಂದಿಯನ್ನು ಕರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 3450 ಮಂದಿಗೆ ಮಾತ್ರ ಸೋಂಕು ಪಾಸಿಟಿವ್ ಇರುವುದು ದೃಢಪಟ್ಟಿದೆ. ಅಂದರೆ ಇದರ ಪ್ರಮಾಣ ಶೇಕಡ 1.1ರಷ್ಟಿದ್ದು, ಇದು ದೇಶದಲ್ಲಿಯೇ ಅತ್ಯಂತ ಕಡಿಮೆಯದ್ದಾಗಿದೆ ಎಂದು ತಿಳಿಸಿದರು.

    ಇದನ್ನೂ ಓದಿ  ತ್ರಿಶತಕ ದಾಟಿದ ಕರೊನಾ ಪಾಸಿಟಿವ್

    ರಾಜ್ಯದಲ್ಲಿ ಈ ಸೋಂಕು ಕಾಣಿಸಿಕೊಂಡಾಗ ಕೇವಲ 2 ಪರೀಕ್ಷಾ ಕೇಂದ್ರಗಳಿದ್ದವು, ಈಗ ರಾಜ್ಯದಲ್ಲಿ 64 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ಇಂದು ಸಹ ಬೀದರ್ ನಗರದಲ್ಲಿ ಪರೀಕ್ಷಾ ಕೇಂದ್ರವನ್ನು ಆರಂಭಿಸಲಾಯಿತು. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಕೋವಿಡ್ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

    ರಾಜ್ಯದ ಸಾವಿರಾರು ಮಕ್ಕಳಿಗೆ ನೀಡಬೇಕಾಗಿದ್ದ ಲಸಿಕೆಗಳನ್ನು ಕೊಡಿಸಲು ಸಾಧ್ಯವಾಗುತ್ತಿಲ್ಲ, ಕರೊನಾರಹಿತ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರಕುತ್ತಿಲ್ಲ, ಈ ಕಾರಣದಿಂದ ಖಾಸಗಿ ಕ್ಲಿನಿಕ್, ಡಿಸ್ಪೆನ್ಸರಿ ಹಾಗೂ ನರ್ಸಿಂಗ್ ಹೋಂಗಳು ತಕ್ಷಣವೇ ಕಾರ್ಯಾರಂಭಿಸಬೇಕು, ತಪ್ಪಿದ್ದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುವುದು ಎಂದು ಸಚಿವರು ಎಚ್ಚರಿಸಿದರು.

    ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಹಿಂದಿರುಗುತ್ತಿರುವವರಲ್ಲಿ ವೈರಾಣು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಇಂತಹ ಪ್ರಯಾಣಿಕರನ್ನು 14 ದಿನಗಳ ಕಾಲ ಕ್ವಾರಂಟೈನಿಗೆ ಒಳಪಡಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿಯೂ ತಿಳಿಸಿದರು.

    VIDEO | ಸತತ ಮಳೆಗೆ ಕೊಚ್ಚಿಹೋದ ಶಿಡ್ಲಗುಂಡಿ ತಾತ್ಕಾಲಿಕ ಸೇತುವೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts