ಭೋಪಾಲ್: ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ಭಾರತೀಯ ಸೇನೆಯ ಬಗ್ಗೆ ನೀಡಿದ ಹೇಳಿದೆ ಇದೀಗ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ. ಜಬಲ್ಪುರದಲ್ಲಿ ನಡೆದ ನಾಗರಿಕ ರಕ್ಷಣಾ ಸ್ವಯಂಸೇವಕರ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ದೇವ್ಡಾ, ಭಾರತೀಯ ಸೇನೆ ಮತ್ತು ಸೈನಿಕರು ಸೇರಿದಂತೆ ಇಡೀ ರಾಷ್ಟ್ರವು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳಿಗೆ ನಮಸ್ಕರಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಸುಪ್ರೀಂ ಕೋರ್ಟ್ ಸಹ ಅವರಿಗೆ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ಬಿಜೆಪಿಯ ಡಿಸಿಎಂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:ಮತ್ತೆ ಕೊರೊನಾ ಭೀತಿ; ಸಿಂಗಾಪುರ, ಹಾಂಕಾಂಗ್ ಭಾಗಗಳಲ್ಲಿ ಅಪ್ಪಳಿಸಿದ ಹೊಸ ಅಲೆ| Covid-19
ಪಹಲ್ಗಾಮ್‌ನಲ್ಲಿ ಪ್ರವಾಸಿಗರಿಗೆ ಧರ್ಮ ಕೇಳಿ, ಮಹಿಳೆಯರನ್ನ ಪಕ್ಕಕ್ಕೆ ನಿಲ್ಲಿಸಿ, ಮಕ್ಕಳ ಮುಂದೆಯೇ ಗುಂಡು ಹಾರಿಸಿ ಕೊಲ್ಲಲಾಯಿತು. ಆ ದಿನದಿಂದಲೂ ದೇಶದ ಜನರ ಮನಸ್ಸಿನಲ್ಲಿ ತುಂಬಾ ಕ್ರೋಧ ಇತ್ತು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವವರೆಗೂ ನೆಮ್ಮದಿಯಿಂದ ಉಸಿರಾಡಲು ಸಾಧ್ಯವಿಲ್ಲ ಎಂಬ ಭಾವನೆ ಜನರಲ್ಲಿತ್ತು. ಸದ್ಯ ಪಹಲ್ಗಾಮ್ ದಾಳಿಗೆ ಪ್ರಧಾನಿ ಮೋದಿ ಅವರು ಕೊಟ್ಟ ಉತ್ತರವನ್ನ ಎಷ್ಟು ಹೊಗಳಿದರೂ ಸಾಲದು. ಯಶಸ್ವಿ ಪ್ರಧಾನಿಗಳಿಗೆ ಧನ್ಯವಾದ ಹೇಳಲು ಇಡೀ ದೇಶ, ದೇಶದ ಸೈನ್ಯ ಹಾಗೂ ಸೈನಿಕರು ಅವರ ಪಾದಗಳಿಗೆ ನಮಸ್ಕರಿಸುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ 10ನೇ ತರಗತಿ ಅಂಕಪಟ್ಟಿ ವೈರಲ್; ವಿರಾಟ್ ಪಡೆದ ಅಂಕ ಎಷ್ಟು ಗೊತ್ತಾ| Virat kohli
'देश की सेना और सैनिक प्रधानमंत्री मोदी के चरणों में नतमस्तक हैं'
• ये बात मध्य प्रदेश की BJP सरकार के उपमुख्यमंत्री जगदीश देवड़ा ने कही है।
जगदीश देवड़ा का यह बयान बेहद ही घटिया और शर्मनाक है।
ये सेना के शौर्य और पराक्रम का अपमान है। जब पूरा देश आज सेना के सामने नतमस्तक… pic.twitter.com/uQmrj40qnj
— Congress (@INCIndia) May 16, 2025
ಭಾರತೀಯ ಸೇನೆಯ ಬಗ್ಗೆ ಜಗದೀಶ್ ದೇವ್ಡಾ ಅವರ ಹೇಳಿಕೆಗಳು ವಿರೋಧ ಪಕ್ಷಗಳಿಂದ ಕಠಿಣ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿವೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಹೇಳಿಕೆಯನ್ನು ಅತ್ಯಂತ ನಾಚಿಕೆಗೇಡಿನ ಮತ್ತು ದುರದೃಷ್ಟಕರ ಎಂದು ಕರೆದಿದ್ದಾರೆ. ಮೊದಲು ಮಧ್ಯಪ್ರದೇಶದ ಸಚಿವರೊಬ್ಬರು ಮಹಿಳಾ ಸೈನಿಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಈಗ ಉಪಮುಖ್ಯಮಂತ್ರಿ ನಮ್ಮ ಸಶಸ್ತ್ರ ಪಡೆಗಳನ್ನು ಅವಮಾನಿಸಿದ್ದಾರೆ.
ನಮ್ಮ ಸೈನಿಕರ ಶೌರ್ಯದ ಬಗ್ಗೆ ಇಡೀ ರಾಷ್ಟ್ರ ಹೆಮ್ಮೆಪಡುತ್ತದೆ, ಆದರೆ ಬಿಜೆಪಿ ನಾಯಕರು ನಿರಂತರವಾಗಿ ಅವರನ್ನು ಅಗೌರವಿಸುತ್ತಿದ್ದಾರೆ. ಅಂತಹ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಬಿಜೆಪಿ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಬಿಜೆಪಿ ನಮ್ಮ ಸೈನಿಕರಿಗೆ ಮತ್ತು ಈ ದೇಶದ ಜನರಿಗೆ ಯಾವ ಸಂದೇಶವನ್ನು ಕಳುಹಿಸಲು ಪ್ರಯತ್ನಿಸುತ್ತಿದೆ ಎಂದು ಪ್ರಿಯಾಂಕಾ ವಾದ್ರಾ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಬಿಜೆಪಿ ಮತ್ತು ಜಗದೀಶ್ ದೇವ್ಡಾ ಕ್ಷಮೆಯಾಚಿಸಬೇಕು. ಅವರನ್ನು ತಮ್ಮ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
(ಏಜೆನ್ಸೀಸ್)