More

    ಹೆಂಡತಿ ಶೀಲ ಶಂಕಿಸಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿಗೆ ಜೀವಾವಧಿ ಶಿಕ್ಷೆ

    ಬೆಂಗಳೂರು: ಶೀಲ ಶಂಕಿಸಿ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸಿಸಿಎಚ್ 72 ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

    ಮಲ್ಲತ್ತಹಳ್ಳಿ ನಿವಾಸಿ ಮಹೇಶ್ ಅಪರಾಧಿ. 2010ರಲ್ಲಿ ಪವಿತ್ರಾ ಎಂಬಾಕೆಯನ್ನು ಮದುವೆ ಆಗಿದ್ದ ಮಹೇಶ್ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಮಹೇಶ್, ವೆಲ್ಡಿಂಗ್ ಕೆಲಸ ಮಾಡುತ್ತಿದ್ದರೇ ಪವಿತ್ರಾ, ಮನೆ ಕೆಲಸದ ಜತೆಗೆ ಹೋಟೆಲ್‌ನಲ್ಲಿ ಕ್ಲೀನಿಂಗ್ ಕೆಲಸ ಸಹ ಮಾಡುತ್ತಿದ್ದಳು.

    ಪತ್ನಿ ಶೀಲದ ಮೇಲೆ ಅನುಮಾನಪಟ್ಟ ಮಹೇಶ್ ಕೆಲಸಕ್ಕೆ ಹೋಗದಂತೆ ತಾಕೀತು ಮಾಡಿದ್ದ. ದಂಪತಿ ನಡುವೆ ಜಗಳ ನಡೆಯುತ್ತಿತ್ತು. 2012ರ ಜ.5ರ ರಾತ್ರಿ 11.30ರಲ್ಲಿ ಸಹ ದಂಪತಿ ನಡುವೆ ಜಗಳವಾಗಿದೆ. ವಿಕೋಪಕ್ಕೆ ತಿರುಗಿ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಸುಟ್ಟ ಗಾಯಗಳಾಗಿದ್ದ ಪವಿತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಜ.16ರಂದು ಅಸುನೀಗಿದ್ದಳು. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡ ಚಂದ್ರಾ ಲೇಔಟ್ ಪೊಲೀಸರು, ಆರೋಪಿಯನ್ನು ಬಂಧಿಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು.

    ಸರ್ಕಾರದ ಪರವಾಗಿ ಎಚ್.ಆರ್.ಸತ್ಯವತಿ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಕೆ.ಎಸ್. ಜ್ಯೋತಿ ಅವರು, ಮಹೇಶ್ ಅಪರಾಧಿ ಎಂದು ಘೋಷಣೆ ಮಾಡಿ ಜೀವಾವಧಿ ಶಿಕ್ಷೆ ಮತ್ತು 2 ಸಾವಿರ ರೂ. ದಂಡ ವಿಧಿಸಿದ್ದಾರೆ. ಮೃತ ಮಹಿಳೆಯ ತಾಯಿ ಲಕ್ಷ್ಮಮ್ಮಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಕೋರ್ಟ್ ಆದೇಶಿಸಿದೆ.

    ಭೀಕರ ಅಪಘಾತ: ಮೂರು ಕುಟುಂಬದ 9 ಮಂದಿ ಸಾವು, ಮೂವರ ಪರಿಸ್ಥಿತಿ ಗಂಭೀರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts