ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ; ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದ ದಿನೇಶ್ ಗುಂಡೂರಾವ್| heart-attack

minister dinesh gundu rao
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Published on

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು (07) ತಜ್ಞರೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹೃದಯಾಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ. ಮಧುಮೇಹ, ಕೊಬ್ಬು ಸೇರಿದಂತೆ ಅನೇಕ ಅಡ್ಡ ಪರಿಣಾಮಗಳು ಹೃದಯಾಘಾತಕ್ಕೆ ಕಾರಣ ಆಗಿವೆ. ರಕ್ತದೊತ್ತಡ, ಶುಗರ್, ದೈಹಿಕ ಚಟುವಟಿಕೆ ಇಲ್ಲದೇ ಇರೋದು, ಇತ್ತೀಚಿನೆ ಜನರ ಜೀವನ ಶೈಲಿ ಕೂಡ ಹೃದಯಾಘಾತಕ್ಕೆ ಕಾರಣ ಆಗಿದೆ ಎಂದು ಹೇಳಿದ್ದಾರೆ.

ಹಾಸನ ಜಿಲ್ಲೆ ಸೇರಿದಂತೆ ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್​ ಗುಂಡೂರಾವ್​, ಕೊರೊನಾ ಲಸಿಕೆಯಿಂದ ಹೃದಯಾಘಾತ ಸಂಭವಿಸಿಲ್ಲ ಎಂದಿದ್ದಾರೆ. ಅಂದಹಾಗೆ ಕೊರೊನಾದಿಂದ ಗುಣಮುಖರಾದವರಿಗೆ ಹೃದಯಾಘಾತವಾಗಿದೆ ಅಂತ ಇದೆ ಎಂದು ಪ್ರತಿಕ್ರಿಯಿಸಿದ್ದಾರೆ.

(ಏಜೆನ್ಸೀಸ್)

ಶಾಲೆಗಳಲ್ಲಿ 15 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳಿಗೆ ತಮ್ಮ ಇಲಾಖೆಯಿಂದ ತಪಾಸಣೆ ಮಾಡುವ ತೀರ್ಮಾನ ಮಾಡಲಾಗುತ್ತದೆ. ಪಠ್ಯ ಪುಸ್ತಕದಲ್ಲಿ ಹೃದಯಾಘಾತದ ಬಗ್ಗೆ ಪಠ್ಯ ಕ್ರಮದಲ್ಲಿ ಅಳವಡಿಸಲು ನಾವು ಕಳಿಸಿದ್ದೇವೆ. ಮಧು ಬಂಗಾರಪ್ಪ ಅಳವಡಿಕೆಗೆ ಒಪ್ಪಿದ್ದಾರೆ. ಮುಂದಿನ ವರ್ಷದ ಪಠ್ಯದಲ್ಲಿ ಅಳವಡಿಕೆ ಮಾಡ್ತಾರೆ. ಸಾರ್ವಜನಿಕ ವಲಯದಲ್ಲಿ ಸಿಪಿಆರ್ ಮಾಡೋಕೆ ನಿರ್ಣಯ ಮಾಡಿದ್ದೇವೆ ಎಂದು ಹೇಳಿದ್ದಾರೆ. ಜೊತೆಗೆ ಸರ್ಕಾರಿ, ಗುತ್ತಿಗೆ ನೌಕರರು ಮತ್ತು ಖಾಸಗಿ ಉದ್ಯೋಗಿಗಳು ವರ್ಷಕ್ಕೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಈ ಬಗ್ಗೆ ನಾವು ಸೂಚನೆ ನೀಡುತ್ತಿದ್ದೇವೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net