‘ಬೆಂಗಳೂರು ಹಬ್ಬ’ದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ಚಾಲನೆ

blank

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಉದ್ಯಾನಗಳಲ್ಲಿ ವಾಯುವಿಹಾರಿಗಳು ಹಾಗೂ ಸಾರ್ವಜನಿಕರಿಗೆ ಪರಿಸರದ ಸಂರಕ್ಷಣೆ ಕುರಿತು ಅರಿವು ಮೂಡಿಸಲು ಸಾಂಸ್ಕೃತಿಕ ಮತ್ತು ಇನ್ನಿತರ ಕಲಾ ಚಟುವಟಿಕೆ ಒಳಗೊಂಡ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

blank

ಉದ್ಯಾನಗಳು ನಗರದ ನಾಗರಿಕರಿಗೆ ಉತ್ತಮವಾದ ಆಮ್ಲಜನಕ ಮತ್ತು ಮನೋಲ್ಲಾಸವನ್ನು ಒದಗಿಸುವ ಮೂಲವಾಗಿದೆ. ಸದ್ಯ ಪಾಲಿಕೆಯು 1,287 ಉದ್ಯಾನಗಳನ್ನು ಅಭಿವೃದ್ಧಿಗೊಳಿಸಿ ನಿರ್ವಹಣೆ ಮಾಡುತ್ತಿದೆ. ಪಾರಂಪರಿಕ ಸಂಸ್ಕೃತಿ, ಕಲೆ ಮತ್ತು ಇನ್ನಿತರ ಕಲಾ ಚಟುವಟಿಕೆಗಳಾದ ಡೊಳ್ಳುಕುಣಿತ, ಜಾನಪದ ಗಾಯನ, ಸುಗಮ ಸಂಗೀತ ಮತ್ತು ಜಾನಪದ ಕಲಾತಂಡಗಳು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಲಿವೆ.

28 ಕ್ಷೇತ್ರಗಳಲ್ಲೂ ಆಯೋಜನೆ:

ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದರಂತೆ 28 ಉದ್ಯಾನಗಳಲ್ಲಿ ಈ ತಿಂಗಳಿನಿಂದ ಮುಂಬರುವ ಮಾರ್ಚ್‌ವರೆಗೆ ವರ್ಷವಿಡೀ ಸಾಂಸ್ಕೃತಿಕ ಮತ್ತು ಮಕ್ಕಳಿಗೆ ಉತ್ತೇಜಿಸುವ ಕಲಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ:

ಬೆಂಗಳೂರು ಹಬ್ಬ ಕಾರ್ಯಕ್ರಮವನ್ನು ಬಸವನಗುಡಿಯ ಕಹಳೆ ಬಂಡೆ ಉದ್ಯಾನದಲ್ಲಿ ಶನಿವಾರ (ಮೇ 17) ಸಂಜೆ 5 ಗಂಟೆಗೆ ಶಾಸಕ ರವಿಸುಬ್ರಹ್ಮಣ್ಯ ಚಾಲನೆ ನೀಡಲಿದ್ದಾರೆ. ಪಾಲಿಕೆಯ ಆಡಳಿತಗಾರ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತರು, ವಲಯ ಆಯುಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ರಾಮಕೃಷ್ಣ ಮಠ ವೃತ್ತದಿಂದ ಕಹಳೆ ಬಂಡೆ ಉದ್ಯಾನದವರೆಗೆ ಬೆಂಗಳೂರು ಹಬ್ಬ ಕುರಿತಾಗಿ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank