ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 19,300ಕ್ಕೇರಿಕೆ

ಅಂಕಾರ: ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 19,300 ದಾಟಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನಾಲ್ಕನೇ ದಿನವಾದ ಗುರುವಾರವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ. ಆದರೆ ರಕ್ತ ಹೆಪು್ಪಗಟ್ಟುವ ಚಳಿ ಮತ್ತು ಹಿಮದ ಮಳೆಯಿಂದಾಗಿ ನೆಲ ಕಚ್ಚಿರುವ ಸಹಸ್ರಾರು ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರನ್ನು ಪತ್ತೆ ಹಚ್ಚುವ, ರಕ್ಷಿಸುವ ಕಾರ್ಯಕ್ಕೆ ಹಿನ್ನಡೆ ಉಂಟಾಗಿದೆ. ಕಂಪನದಲ್ಲಿ ಬದುಕುಳಿದವರು ಆಹಾರ ಮತ್ತು ಆಶ್ರಯಕ್ಕಾಗಿ ಅಂಗಲಾಚುತ್ತಿರುವ ದೃಶ್ಯ ಮನಸು ಕಲಕುವಂತಿದೆ. ಸರ್ಕಾರದ ಪರಿಹಾರ ಕಾರ್ಯಕ್ಕೆ ಸಂತ್ರಸ್ತರು … Continue reading ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 19,300ಕ್ಕೇರಿಕೆ