More

    ಕೊಳೆತ ಸ್ಥಿತಿಯಲ್ಲಿ ಪ್ಲ್ಯಾಸ್ಟಿಕ್ ಬ್ಯಾಗ್​ನಲ್ಲಿತ್ತು ಮಹಿಳೆಯ ದೇಹ; ಪೊಲೀಸರಿಂದ ಮಗಳ ವಿಚಾರಣೆ

    ನವದೆಹಲಿ: ಪ್ಲಾಸ್ಟಿಕ್ ಚೀಲದಲ್ಲಿ ಸುಮಾರು 55 ವರ್ಷ ಪ್ರಾಯದ ಮಹಿಳೆಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಬೈನ ಲಾಲ್‌ಬಾಗ್ ಪ್ರದೇಶದಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಕಬೋರ್ಡ್​ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತ ಮಹಿಳೆಯೆ ಮಗಳೇ ಕೊಲೆ ಮಾಡಿ, ಮೃತದೇಹವನ್ನು ಬಚ್ಚಿಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಮೃತ ಮಹಿಳೆಯನ್ನು ವೀಣಾ ಪ್ರಕಾಶ್ ಜೈನ್ ಎಂದು ಗುರುತಿಸಲಾಗಿದೆ. ಸದ್ಯ ಆಕೆಯ ಮಗಳನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಡಿಸಿಪಿ ಪ್ರವೀಣ್ ಮುಂಡೆ ತಿಳಿಸಿದ್ದಾರೆ.

    ಕಾಣೆಯಾದ ಬಗ್ಗೆ ಮೃತಳ ಸಹೋದರ ನೀಡಿದ ದೂರಿನಂತೆ ಪೊಲೀಸರು ವೀಣಾ ಪ್ರಕಾಶ್​ಳನ್ನು ಹುಡುಕಾಡಿದ್ದಾರೆ. ಇದಕ್ಕಾಗಿ ಆಕೆ ವಾಸವಿದ್ದ ಮನೆಯ ವಠಾರದಲ್ಲಿ ನೆರೆಹೊರೆಯ ಮಂದಿಯನ್ನು ವಿಚಾರಿಸಿದ್ದಾರೆ. ಈ ವೇಳೆ ಸುಮಾರು ಎರಡು ತಿಂಗಳಿನಿಂದ ವೀಣಾ ಪ್ರಕಾಶ್​ಳನ್ನು ನೋಡಿಲ್ಲ ಎಂದು ಹೇಳಿದ್ದಾರೆ. ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ಪತ್ತೆಕಾರ್ಯ ಚುರುಕುಗೊಳಿಸಿದ್ದಾರೆ.

    ಇದನ್ನೂ ಓದಿ: ವಜ್ರದ ವ್ಯಾಪಾರಿಯ ಮಗಳೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಗೌತಮ್ ಅದಾನಿ ಪುತ್ರ

    ಈ ವೇಳೆ ಕಳೆದ ಮಂಗಳವಾರ ಸಂಜೆ ಕಪಾಟಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಇರುವುದು ಪತ್ತೆಯಾಗಿದೆ. ಕೂಡಲೇ ಪೊಲೀಸರು ಬಂದು ವಿಚಾರಣೆ ನಡೆಸಿದ್ದಾರೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದರೂ ಯಾವುದೇ ರೀತಿಯ ದುರ್ವಾಸನೆ ಪೊಲೀಸರಿಗಾಗಲಿ, ಅಕ್ಕಪಕ್ಕದವರ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ.

    ಮೃತದೇಹವನ್ನು ಪರಿಶೀಲಿಸಿದ ಪೊಲೀಸರು, ಆಕೆಯನ್ನು ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಬಳಿಕ ದೇಹವನ್ನು ಹರಿತವಾದ ಆಯುಧದಿಂದ ಕೈಕಾಲು ಸೇರಿದಂತೆ ತುಂಡರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts