More

    ಅಭಿವೃದ್ಧಿ ಕಾಮಗಾರಿ ಮಾರ್ಚ್ ಅಂತ್ಯದೊಳಗೆ ಪೂರ್ಣ

    ಹನೂರು: ಪಟ್ಟಣದಲ್ಲಿ ಪ್ರಗತಿಯಲ್ಲಿರುವ ಕೆ.ಶಿಪ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.

    ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಗುರುವಾರ ಕೆ.ಶಿಪ್ ರಸ್ತೆ ಕಾಮಗಾರಿ ಆರಂಭಿಸುವ ಸಂಬಂಧ ಅಧಿಕಾರಿಗಳೊಂದಿಗೆ ಮಾತನಾಡಿದರು.
    ಪಟ್ಟಣದಲ್ಲಿ ಕೆ.ಶಿಪ್ ಯೋಜನೆಯಡಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಕಾರಣಾಂತರದಿಂದ ನನೆಗುದಿಗೆ ಬಿದ್ದಿತ್ತು. ಸಾರ್ವಜನಿಕರಿಂದ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ ಕೇಳಿಬಂದ ಹಿನ್ನೆಲೆ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಬಳಿ ಉಪ ನೋಂದಣಾಧಿಕಾರಿ ಕಚೇರಿ ಕಾಂಪೌಂಡ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಂಪೌಂಡ್ ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಂಟಪ ನಿರ್ಮಿಸಲು ಉದ್ದೇಶಿಸಿದ್ದು, ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

    ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ಕೆ.ಶಿಪ್ ಯೋಜನೆಯ ಎಇಇ ರಾಜೇಶ್‌ಮುನ್ಸಿ, ಪ.ಪಂ. ಸದಸ್ಯ ಸಂಪತ್‌ಕುಮಾರ್, ಮಹೇಶ್ ನಾಯಕ್, ಶಶಿಕುಮಾರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts