More

    ಸ್ವಚ್ಛ ಪಾದಯಾತ್ರೆಗೆ ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ಸಕಲ ಸಿದ್ದತೆ

    ಬಣಕಲ್: ಮಹಾಶಿವರಾತ್ರಿ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಭಾಗದ ಸಾವಿರಾರು ಭಕ್ತಾಧಿಗಳು ಮೂಡಿಗೆರೆ ಮಾರ್ಗವಾಗಿ ಧರ್ಮಸ್ಥಳಕ್ಕೆ ಸಾಗುತ್ತಿದ್ದಾರೆ. ಈ ಬಾರಿ ಪಾದಯಾತ್ರೆ ಮಾರ್ಗದಲ್ಲಿ ಸ್ವಚ್ಛತೆ ಕಾಪಾಡಲು ಜಿಲ್ಲಾಡಳಿತ ಹಾಗೂ ಮೂಡಿಗೆರೆ ತಾಲೂಕು ಆಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.
    ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಚೀಕನಹಳ್ಳಿಯಿಂದ ಚಾರ್ಮಾಡಿ ಘಾಟ್‌ವರೆಗೆ ಸುಮಾರು 40 ಕಿ.ಮೀ ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ ಭಕ್ತಾಧಿಗಳು ಪಾದಯಾತ್ರೆ ಮೂಲಕ ಸಾಗುವ ರಸ್ತೆ ಇಕ್ಕೆಲಗಳಲ್ಲಿ ರಾಶಿ ರಾಶಿ ತ್ಯಾಜ್ಯ ಸಂಗ್ರಹವಾಗುತ್ತಿತ್ತು. ಅದನ್ನು ತೆರವುಗೊಳಿಸುವುದೇ ತಾಲೂಕು ಆಡಳಿತಕ್ಕೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿತ್ತು.
    ಬಣಕಲ್, ಕೊಟ್ಟಿಗೆಹಾರ ಭಾಗದ ರಸ್ತೆ ಬದಿ ಹರಿಯುವ ನದಿ ತೀರಗಳಲ್ಲಿ ಮಲ,ಮೂತ್ರ ವಿಸರ್ಜನೆಯಿಂದ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು. ಚಾರ್ಮಾಡಿ ಘಾಟ್‌ನ ರಸ್ತೆ ಇಕ್ಕೆಲಗಳಲ್ಲಿ ಸಂಗ್ರಹವಾದ ಅಪಾರ ಪ್ಲಾಸ್ಟಿಕ್ ತ್ಯಾಜ್ಯಗಳು ಕಾಡು ಸೇರುತ್ತಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದ ಹಿನ್ನಲೆಯಲ್ಲಿ ಈ ಬಾರಿ ಜಿಲ್ಲಾಡಳಿತ ಹಾಗೂ ಮೂಡಿಗೆರೆ ತಾಲೂಕು ಆಡಳಿತ ಪೂರ್ವಭಾವಿ ಸಭೆಗಳನ್ನು ನಡೆಸಿ ಪಾದಯಾತ್ರೆ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts