More

    ಕೈಗಾರಿಕೆ, ಆರೋಗ್ಯ ಕ್ಷೇತ್ರದಲ್ಲಿ ಹಿಂದುಳಿದಿದೆ ಜಿಲ್ಲೆ

    ಅಂಕೋಲಾ: ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಉತ್ತರ ಕನ್ನಡ ಜೆಲ್ಲೆ ಕೈಗಾರಿಕೆ, ಆರೋಗ್ಯ ಕ್ಷೇತ್ರದಲ್ಲಿ ಹಿಂದುಳಿದಿದೆ. ಡೋಂಗಿ ಪರಿಸರವಾದಿಗಳ ಅನಗತ್ಯ ಹೋರಾಟದಿಂದಾಗಿ ಅಂಕೋಲಾ-ಹುಬ್ಬಳ್ಳಿ ರೈಲ್ವೆ ಯೋಜನೆ ಇನ್ನೂ ಜಾರಿಯಾಗಲು ಸಾಧ್ಯವಾಗಿಲ್ಲ. ಪರಿಸರ ಕಾಳಜಿ ಉತ್ತರ ಕನ್ನಡ ಜಿಲ್ಲೆಯವರಿಗೆ ಹೊಸತೇನಲ್ಲ. ಹುಟ್ಟಿನಿಂದಲೇ ಆ ಕುರಿತು ಜಾಗೃತಿ ವಹಿಸುವರು ಎಂದು ಹೈಕೋರ್ಟ್ ಹಿರಿಯ ವಕೀಲ ರವೀಂದ್ರ ಕೊಲ್ಲೆ ಹೇಳಿದರು.

    ಇಲ್ಲಿನ ಕೆಎಲ್‌ಇ ಶಿಕ್ಷಣ ಮಹಾವಿದ್ಯಾಲಯ, ರೋಟರಿ ಕ್ಲಬ್, ಉತ್ತರ ಕನ್ನಡ ಜಿಲ್ಲಾ ನೋಟರಿ ಸಂಘ, ವಕೀಲರ ಸಂಘದ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ವಿನಾಯಕ ಜಿ. ಹೆಗಡೆ ಮಾತನಾಡಿ, ಉತ್ತರ ಕನ್ನಡದ ಅಭಿವೃದ್ಧಿಗೆ ರಾಜಕಾರಣಿಗಳೇ ತೊಡಕಾಗಿದ್ದಾರೆ ಎಂದರು.
    ರವೀಂದ್ರ ಕೊಲ್ಲೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭಟ್ಕಳ ಜ್ಞಾನೇಶ್ವರಿ ಬಿಎಡ್ ಕಾಲೇಜು ಪ್ರಾಚಾರ್ಯ ವೀರೇಂದ್ರ ಶಾನಭಾಗ, ರೋಟರಿ ಕ್ಲಬ್ ತಾಲೂಕು ಅಧ್ಯಕ್ಷ ವಿನೋದ ಶಾನಭಾಗ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಭಾಸ್ಕರ ನಾರ್ವೇಕರ ಮಾತನಾಡಿದರು. ಕಸಾಪ ತಾಲೂಕು ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ಡಾ. ಕರುಣಾಕರ ನಾಯ್ಕ, ಮಹಾಂತೇಶ ರೇವಡಿ ಇತರರಿದ್ದರು.

    ಉಪನ್ಯಾಸಕಿ ಡಾ. ಪುಷ್ಪಾ ನಾಯ್ಕ ಸ್ವಾಗತಿಸಿದರು, ವಕೀಲ ಉಮೇಶ ಎನ್.ನಾಯ್ಕ, ಉಪನ್ಯಾಸಕಿ ಪೂರ್ವಿ ಹಳ್ಗೇಕರ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts