More

  ಮನೆ ಬಾಗಿಲು ಒಡೆದು ಚಿನ್ನಾಭರಣ ಕಳವು

  ಕೊಳ್ಳೇಗಾಲ : ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಮನೆಯೊದರ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆ ಬಾಳುವ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಹಾಗೂ 30 ಸಾವಿರ ರೂ. ನಗದು ಕಳವು ಮಾಡಲಾಗಿದೆ.
  ಗ್ರಾಮದ ರಂಗರಾಜು ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ ಸೋಮವಾರ ತೆರಳಿದ್ದರು. ಮಂಗಳವಾರ ಮನೆಯ ಬಾಗಿಲು ತೆರೆದಿರುವುದನ್ನು ನೋಡಿದ ಅಕ್ಕಪಕ್ಕದ ಮನೆಯವರು ರಂಗರಾಜು ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಮನೆಯವರು ದೇವರ ಕಾರ್ಯವನ್ನು ಅರ್ಧಕ್ಕೆ ಬಿಟ್ಟು ವಾಪಸ್ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನ ನಡೆಸಿರುವುದು ಗೊತ್ತಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳವನ್ನು ಕರೆಯಿಸಿ ಪರಿಶೀಲಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts