ಗ್ರಾಮಸಭೆಗಳ ಮೂಲಕ ಗ್ರಾಮ ಸ್ವರಾಜ್ಯದ ಕನಸು ನನಸು; ಶಾಸಕ ಎಸ್.ಆರ್.ವಿಶ್ವನಾಥ್ ಅಭಿಮತ

srv
Published on

ಯಲಹಂಕ : ಗ್ರಾಮ ಸಭೆಗಳ ಮೂಲಕ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತಿದ್ದು, ಗ್ರಾಮಗಳನ್ನು ಸಬಲಗೊಳಿಸುವ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಗ್ರಾಮದ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಷಯಗಳನ್ನು ಚರ್ಚಿಸಲು ಗ್ರಾಮ ಸಭೆಗಳು ಸಹಾಯಕವಾಗುತ್ತವೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ.

ಯಲಹಂಕ ಕ್ಷೇತ್ರದ ಕಾಚೋಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಾಚೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಸರೋಜಮ್ಮ, ಉಪಾಧ್ಯಕ್ಷರಾದ ಗಂಗಾಧರಯ್ಯ ನೇತೃತ್ವದಲ್ಲಿ ನಡೆದ ಗ್ರಾಮಸಭೆಯಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಅಂಗವಿಕಲರಿಗೆ ವೀಲ್ ಚೇರ್ ಸೇರಿ ವಿವಿಧ ಪರಿಕರಗಳು ಹಾಗೂ ರೈತರಿಗೆ ತೆಂಗಿನ ಸಸಿ ಮತ್ತು ಎಸ್ಸಿ ಎಸ್ಟಿ ಶಾಲಾ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಾಡಿದರು.

ಇದೇ ವೇಳೆ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳಿಗೆ ಕುಕ್ಕರ್ ಮತ್ತು ಅಂಗನವಾಡಿ ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿದರು. ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸದಸ್ಯರುಗಳು ಸೇರಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net