ಆಲೂರು: ರಾಷ್ಟ್ರೀಯ ಹೆದ್ದಾರಿ-75ರ ಮಾವನೂರು ಗ್ರಾಮದ ಬಳಿ ಭಾನುವಾರ ಸಂಜೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಲೂರು ತಾಲೂಕಿನ ಪಟ್ನ ಗ್ರಾಮದ ಸತೀಶ್‌ನಾಯಕ, ರಾಜನಾಯಕ, ಪ್ರವೀಣ್, ಕಮಲಮ್ಮ, ವಿನುತಾ ಹಾಗೂ ಮಕ್ಕಳಾದ ಪ್ರೀತಮ್, ಪಾಪು ಪ್ರಾಣಾಪಾಯದಿಂದ ಪಾರಾದವರು.
ಒಂದೇ ಕುಟುಂಬದವರಾದದ ಇವರು ಹಾಸನ ತಾಲೂಕಿನ ಹಿರೇಗೌಡನಹಳ್ಳಿ ಗ್ರಾಮದ ತಮ್ಮ ಸಂಬಂಧಿಕರ ಮನೆ ಶುಭಕಾರ್ಯಕ್ಕೆ ತೆರಳಿ ಹಿಂದಿರುಗುತ್ತಿದ್ದರು. ಈ ವೇಳೆ ಮಾವನೂರು ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆ ಚಿಕಿತ್ಸೆ ಕೊಡಿಸಲಾಗಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.