ಕಾದಾಟದಲ್ಲಿ ಗಂಡಾನೆ ಸಾವು

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಕಾದಾಟದಲ್ಲಿ ಗಂಡಾನೆಯೊಂದು ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಹುಲಿ ಯೋಜನೆಯ ಗೋಪಾಲಸ್ವಾಮಿ ಬೆಟ್ಟ ವಲಯದ ಚಮ್ಮನಹಳ್ಳ ಪ್ರದೇಶದಲ್ಲಿ ಗಸ್ತು ಸಿಬ್ಬಂದಿಗೆ ಏ.20ರ ಶನಿವಾರ ಸುಮಾರು 40 ವರ್ಷದ ಗಂಡಾನೆಯ ಮೃತ ದೇಹ ಪತ್ತೆಯಾಗಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಅರಣ್ಯ ಇಲಾಖೆಯ ಪಶುವೈದ್ಯ ಡಾ.ನಾಗರಾಜು ಮರಣೋತ್ತರ ಪರೀಕ್ಷೆ ನಡೆಸಿ ಕಳೇಬರವನ್ನು ಸುಟ್ಟುಹಾಕಿದರು. ಎರಡು ಮದಗಜಗಳ ನಡುವೆ ನಡೆದ ಕಾದಾಟದಲ್ಲಿ ಹೊಟ್ಟೆ ಹಾಗೂ ಇತರೆಡೆ ತೀವ್ರವಾಗಿ ಗಾಯಗಳಾಗಿ ಆನೆಯು ಸಾವಿಗೀಡಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಬಂಡೀಪುರ ಉಪವಿಭಾಗದ ಎಸಿಎಫ್ ಎಂ.ಎಸ್.ರವಿಕುಮಾರ್, ಆರ್‌ಎಫ್‌ಒ ಎನ್.ಸಿ.ಮಹದೇವು ಭೇಟಿ ನೀಡಿದ್ದರು.

Leave a Reply

Your email address will not be published. Required fields are marked *