ನವದೆಹಲಿ: ಕ್ರಿಕೆಟ್ ಆಟಗಾರ ಎಮ್.ಎಸ್ ಧೋನಿ ಅವರು, ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮನ್ ಮತ್ತು ಬೆಳ್ಳಿ ಅವರಿಗೆ ಅವರ ಹೆಸರು ಬರೆದಿರುವ ಸಿಎಸ್ಕೆ ಜೆರ್ಸಿಗಳನ್ನು ಉಡುಗೊರೆಯಾಗಿ ನೀಡಿ ಗೌರವಿಸಿದ್ದಾರೆ.
ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮನ್-ಬೆಳ್ಳಿ ಮತ್ತು ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರು ಚೆನ್ನೈ ಸೂಪರ್ ಕಿಂಗ್ಸ್‌ನಿಂದ ಗೌರವ ಸ್ವೀಕರಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿತಯಾದಲ್ಲಿ ವೈರಲ್ ಆಗುತ್ತಿವೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ಎಂ.ಎಸ್ ಧೋನಿ ಈ ಮೂವರಿಗೆ ಹಳದಿ ಜೆರ್ಸಿ ನೀಡಿದರು. ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿ ಸಹ ಭಾಗವಹಿಸಿದ್ದರು.
ಇದನ್ನೂ ಓದಿ: ನವವಿವಾಹಿತನ ಮತಾಭಿಮಾನ: ಧರ್ಮಸ್ಥಳದಲ್ಲಿ ಮದುವೆಯಾಗಿ ಹಾಸನಕ್ಕೆ ಬಂದು ಮತದಾನ
7ನೇ ನಂಬರ್ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು.
ಜರ್ಸಿ ವಿಶೇಷತೆ:
ಧೋನಿ ಈ ತಾರಾ ಜೋಡಿಗೆ ನೀಡಿದ್ದ ಜೆರ್ಸಿ ಹಿಂಭಾಗದಲ್ಲಿ ಬೊಮ್ಮನ್ ಮತ್ತು ಬೆಳ್ಳಿ ಅವರ ಹೆಸರನ್ನು ಮುದ್ರಿಸಲಾಗಿತ್ತು. ಐಪಿಎಲ್ ತಂಡದ ಅಧಿಕೃತ ಇನ್‌ಸ್ಟಾಗ್ರಾಮ್ ಪುಟವು ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡಿದೆ, “ನಮ್ಮ ಹೃದಯವನ್ನು ಗೆದ್ದ ತಂಡಕ್ಕೆ ಮೆಚ್ಚುಗೆಯ ಘರ್ಜನೆಗಳು! ಬೊಮ್ಮನ್, ಬೆಳ್ಳಿ ಮತ್ತು ಚಲನಚಿತ್ರ ನಿರ್ಮಾಪಕ ಕಾರ್ತಿಕಿ ಗೊನ್ಸಾಲ್ವಿಸ್ ಎಂದು ಬರೆದುಕೊಂಡಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾ ತುಂಬಾ ಹರಿದಾಡುತ್ತಿವೆ.
Karnataka Assembly Election 2023; ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಕುಸಿದು ಬಿದ್ದು ಅಸ್ವಸ್ಥ!