ಕಾಂಗ್ರೆಸ್ ಗ್ಯಾರಂಟಿ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ: DK ಶಿವಕುಮಾರ್ | Guarantee

untitled-design-12-687900512cc81
Published on

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ( Guarantee)ಯೋಜನೆಗಳನ್ನು ಜಾರಿ ಮಾಡಿದ್ದು, ನಮ್ಮ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದರು. “ಬಡವರ ಬದುಕಿಗಾಗಿ ನಾವು ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಜಮೀನು, ನಿವೇಶನ, ಪಿಂಚಣಿ, ಮಕ್ಕಳಿಗೆ ಬಿಸಿಯೂಟ ಸೇರಿದಂತೆ ಅನೇಕ ಕಾರ್ಯಕ್ರಮ ಕೊಟ್ಟಿದೆ. ಅದೇ ರೀತಿ ನಾವು ಗ್ಯಾರಂಟಿ ಯೋಜನೆ ನೀಡಿದೆವು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಮಂತ್ರಿಗಳು ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರು ಟೀಕೆ ಮಾಡಿದರು” ಎಂದರು.

“ಕರ್ನಾಟಕದಲ್ಲಿ ಯೋಜನೆ ಜಾರಿಯಾದ ನಂತರ ಬಿಜೆಪಿಯವರೇ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ರಾಜ್ಯಗಳಲ್ಲಿ ಘೋಷಣೆ ಮಾಡಿದ್ದರು. ಈಗ ಬಿಹಾರದಲ್ಲಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಸದಾ ದೇಶಕ್ಕೆ ಮಾದರಿ. ಕಾಂಗ್ರೆಸ್ ಮಾದರಿಯನ್ನು ಇಡೀ ದೇಶವೇ ಪಾಲಿಸುತ್ತಿದೆ” ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net