ಸರಗೂರಿನಲ್ಲಿ ವಿಜೃಂಭಣೆಯ ರಥೋತ್ಸವ

ಸರಗೂರು: ಪಟ್ಟಣದಲ್ಲಿ ಬುಧವಾರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ರಥ ಎಳೆದು ಹರಕೆ ತೀರಿಸಿದ ಭಕ್ತರು, ದೇವರ ದರ್ಶನ ಪಡೆದು ಭಕ್ತಿ ಸಮರ್ಪಣೆ ಮಾಡಿದರು.

ಇದಕ್ಕೂ ಮುನ್ನ ಬೆಳಗಿನ ಜಾವದಿಂದಲೇ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಮ-ಹವನ, ಅಭಿಷೇಕ ನಡೆದವು. ಕಪಿಲಾ ನದಿಗೆ ತೆರಳಿ ಗಂಗಾಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ಪೂರ್ಣಕುಂಭ ಕಳಸ ತರಲಾಯಿತು. ಬಳಿಕ ಮೂಲದೇವರಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ಮಾಡಲಾಯಿತು. ಉತ್ಸವ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ, ರಥದ ಮೇಲೆ ಪ್ರತಿಷ್ಠಾಪಿಸಲಾಯಿತು.

ರಥ ಸಂಚರಿಸಿದ ರಸ್ತೆಗಳನ್ನು ತಳಿರು-ತೋರಣ, ಬಣ್ಣದ ರಂಗೋಲಿ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಥೋತ್ಸವಕ್ಕೆ ಅಗಮಿಸಿದ್ದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪಟ್ಟಣದ ಎಲ್ಲ ಸಮಾಜದ ಯಜಮಾನರು, ಮುಖಂಡರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *