ವಿಕ್ರಮಾದಿತ್ಯ ನೌಕೆಯಲ್ಲಿ ಬೆಂಕಿ ಅವಘಡ, ಕಮಾಂಡರ್ ಸಾವು

ಕಾರವಾರ: ಭಾರತೀಯ ನೌಕಾ ಸೇನೆಯ ಯುದ್ದ ವಿಮಾನ ವಾಹಕ ನೌಕೆ ಐಎನ್​ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಕಮಾಂಡರ್ ಡಿ.ಎಸ್. ಚೌವ್ಹಾಣ್ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪತಂಜಲಿ ನೌಕಾ ಆಸ್ಪತ್ರೆಗೆ ಸೇರಿಸಲಾಗಿದೆ.

ಇಲ್ಲಿನ ಕದಂಬ ನೌಕಾನೆಲೆಯಲ್ಲಿ ವಿಕ್ರಮಾದಿತ್ಯ ಲಂಗರು ಹಾಕುವ ವೇಳೆ ಘಟನೆ ನಡೆದಿದೆ. ಬೆಂಕಿ ನಂದಿಸಲಾಗಿದೆ ಎಂದು ನೌಕಾ ಸೇನೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *