More

    ಯುವ ಪೀಳಿಗೆಯ ಭವಿಷ್ಯ ನಿರ್ಧರಿಸುವ ಲೋಕಚುನಾವಣೆ

    ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಯುವ ಪೀಳಿಗೆ ಭವಿಷ್ಯ ನಿರ್ಧರಿಸುವ ಚುನಾವಣೆಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಹೇಳಿದರು.
    ನಗರದ ಹೊರವಲಯದ ಹಿರೇಮಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರವಾಗಿ ಮತಯಾಚನೆ ನಡೆಸಿ ಮಾತನಾಡಿದ ಅವರು, ಇಂದು ಮಹಿಳೆಯರು ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಹೇಳಿದರು.
    ಸಂವಿಧಾನ ಬದಲಿಸುತ್ತೇವೆ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಹೀಯಾಳಿಸುತ್ತಿರುವ ಬಿಜೆಪಿ ತಿರಸ್ಕರಿಸಿ ಬಡವರು, ದೀನ ದಲಿತರ ಬದುಕಿನ ಬಗ್ಗೆ ಚಿಂತಿಸುತ್ತಿರುವ ಕಾಂಗ್ರೆಸ್ ಬೆಂಬಲಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರ ಅವಾಂತರಗಳಿಂದ ದೇಶದಲ್ಲಿ ತಲ್ಲಣ ಉಂಟಾಗಿದೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ಗಾಂಧಿ ನೇತೃತ್ವದಲ್ಲಿ ಭಾರತ ಜೋಡೋ ಮೂಲಕ ಜನಜಾಗೃತಿ ಮೂಡಿಸಿದ್ದನ್ನು ಸಹಿಸಿಕೊಳ್ಳದ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.
    ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಬಡವರ ಬದುಕಿನ ಪರ ಯೋಚನೆ ಮಾಡುವ ಕಾಂಗ್ರೆಸ್ ಬೆಲೆ ಏರಿಕೆಯಿಂದ ತತ್ತರಿಸಿದ್ದು, ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ರೂ. ನೀಡುವ ಮೂಲಕ ಆರ್ಥಿಕ ಸದೃಢರನ್ನಾಗಿಸಿದೆ. ಉಚಿತ ವಿದ್ಯುತ್, ಬಸ್ ಪ್ರಯಾಣ, ಅನ್ನಭಾಗ್ಯದಡಿ ಉಚಿತ 10 ಕೆಜಿ ಅಕ್ಕಿ ಹಾಗೂ ಯುವನಿಧಿಯಡಿ ನಿರುದ್ಯೋಗಿ ಯುವಕರಿಗೆ 3 ಸಾವಿರ ರೂ ನೀಡಲಾಗುತ್ತಿದೆ ಎಂದರು.
    ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೆಂಕಟೇಶ್ ನಾಯ್ಡು, ಜಿಲ್ಲಾ ಕಾರ್ಯದರ್ಶಿ ರಾಮಚಂದ್ರ, ನಗರಾಧ್ಯಕ್ಷ ತನೂಜ್‌ನಾಯ್ಡು, ಗ್ರಾಮಸ್ಥರಾದ ಎಚ್.ಎಸ್ ಜಗದೀಶ್, ಎಚ್.ಬಿ ಸುರೇಶ್, ಚಂದ್ರಪ್ಪ, ಎಚ್.ಎಸ್.ಸುರೇಶ್, ಗಂಗಾಧರ್, ಎಚ್.ವೈ.ಮೋಹನ್, ಜಯಣ್ಣ, ಶಿವಣ್ಣ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts