ಬಾಲಕಿ ನೇಣು ಬಿಗಿದು ಆತ್ಮಹತ್ಯೆ

0 Min Read
ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ತಾಲೂಕಿನ ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಸಿ ಕಾಲನಿಯಲ್ಲಿ ಬಾಲಕಿಯೊಬ್ಬಳು ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆೆ.
ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಸಿ ಕಾಲನಿಯ ಇಲಯರಾಜ್ ಅವರ ಪುತ್ರಿ ಕೀರ್ತನಾ(15) ನೇಣು ಬಿಗಿದುಕೊಂಡಿದ್ದು, ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

See also  ಕೆಎಫ್‌ಡಿ ನಿಯಂತ್ರಣಕ್ಕೆ ಮುಂಜಾಗ್ರತೆ ಅವಶ್ಯ
Share This Article