Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಆ ಹುಡುಗಿ ನನ್ನ ಮಗಳಿದ್ದಂತೆ: ಅತ್ಯಾಚಾರ ಆರೋಪಿ ದೇವ ಮಾನವ ಡಾಟಿ ಮಹಾರಾಜ್​

Thursday, 14.06.2018, 11:52 AM       No Comments

ಪಾಲಿ (ರಾಜಸ್ಥಾನ): ತಮ್ಮ ಶಿಷ್ಯೆಯಿಂದ ಅತ್ಯಾಚಾರ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಡಾಟಿ ಮಹಾರಾಜ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ನನ್ನ ವಿರುದ್ಧ ದೂರು ಕೊಟ್ಟಿರುವವರು ನನ್ನ ಮಗಳಿದ್ದಂತೆ. ನನ್ನನ್ನು ಗಲ್ಲಿಗೇರಿಸಿದರೂ ಅವರನ್ನು ದೂರುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನು ಆ ಹುಡುಗಿಯ ವಿರುದ್ಧ ಯಾವುದೇ ಆಪಾದನೆ ಮಾಡುವುದಿಲ್ಲ. ಏಕೆಂದರೆ ಆಕೆ ನನ್ನ ಮಗಳಿದ್ದಂತೆ. ಇನ್ನು ಮುಂದೆಯೂ ಮಗಳಂತೆಯೇ ಕಾಣುತ್ತೇನೆ, ನನ್ನನ್ನು ಗಲ್ಲಿಗೇರಿಸಿದರೂ ಆಕೆಯ ವಿರುದ್ಧ ಆರೋಪಿಸುವುದಿಲ್ಲ. ನಾನೇದರೂ ತಪ್ಪು ಮಾಡಿದ್ದರೆ ಕಾನೂನು ನೋಡಿಕೊಳ್ಳುತ್ತದೆ. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದಿದ್ದಾರೆ.

ಎರಡು ವರ್ಷಗಳ ಹಿಂದೆ ಶನಿಧಾಮದಲ್ಲಿ ಡಾಟಿ ಮಹಾರಾಜ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅವರ ಶಿಷ್ಯೆ ಫತೇಪುರ್​ ಬೆರಿ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಡಾಟಿ ಮಹಾರಾಜ್​ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್​ 376, 377, 354 ಮತ್ತು 34ರ ಅಡಿಯಲ್ಲಿ ದೂರು ದಾಖಲಾಗಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top