More

    ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ನೈತಿಕತೆ ಕಳೆದುಕೊಂಡ ಸರ್ಕಾರ

    ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಸರಣಿ ಕೊಲೆಗಳು ನಡೆಯುತ್ತಿವೆ. ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ನೈತಿಕತೆ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.
    ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎ4 ಅಪರಾಧಿಯನ್ನು ಎ1 ಮಾಡುತ್ತಾರೆ, ಎ1 ಅಪರಾಧಿಯನ್ನು ರಕ್ಷಣೆ ಮಾಡುತ್ತಾರೆ. ಇದು ಕಾಂಗ್ರೆಸ್ ಸರ್ಕಾರದ ರಾಜಕೀಯ ನೀತಿ ಎಂದು ಟೀಕಿಸಿದರು.
    ಜೈನ ಮುನಿ ಕೊಲೆ, ಬೆಂಗಳೂರಲ್ಲಿ ಹಾಡಹಗಲೇ ಟೆಕ್ಕಿ ಕೊಲೆ, ಹಲ್ಲೆ, ವೇಣುಗೋಪಾಲ್ ಕೊಲೆ, ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನ ಶವ ನೀರಲ್ಲಿ ಪತ್ತೆಯಾಗಿರುವುದಕ್ಕಿಂತ ಬೇರೆ ಸಾಕ್ಷಿಗಳು ಬೇಕೇ? ಹನುಮ ಜಯಂತಿ ಯಶಸ್ವಿಯಾಗಿದ್ದಕ್ಕೆ ವೇಣುಗೋಪಾಲ್ ಕೊಲೆಯಾಗಿದೆ ಎಂದು ಆರೋಪಿಸಿದರು.
    ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಆರ್‌ಎಸ್‌ಎಸ್‌ಗೆ ನೀಡಿದ್ದ ಭೂಮಿಯನ್ನು ಸರ್ಕಾರ ವಾಪಸ್ ಪಡೆಯುತ್ತಿದೆ. ಆರ್‌ಎಸ್‌ಎಸ್ ಯಾವುದೇ ಜಾತಿ, ಧರ್ಮದ ಪರ ಮತ್ತು ವಿರೋಧವಾಗಿಲ್ಲ. ರಾಷ್ಟ್ರ ಹಿತದ ಕೆಲಸ ಮಾಡುವ ಸಂಸ್ಥೆಯಾಗಿದೆ. ಸಾಮಾಜಿಕ ಚಟುವಟಿಕೆಗಳ ಮೂಲಕ ಉತ್ತಮ ಶಿಕ್ಷಣ ನೀಡುತ್ತಿದೆ. ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ಆರ್‌ಎಸ್‌ಎಸ್ ಸೇವೆ ನೀಡುತ್ತದೆ. ಅಂಥ ಸಂಘಕ್ಕೆ ನೀಡಿದ ಜಮೀನು ವಾಪಸ್ ಪಡೆಯುವ ಮೂಲಕ ದ್ವೇಷದ ರಾಜಕಾರಣ ಮಾಡಿದೆ. ಇಂಥದ್ದನ್ನು ಬಿಡಬೇಕು. 136 ಸ್ಥಾನ ಗೆದ್ದಿದ್ದೇವೆಂದು ದರ್ಪದಿಂದ ಹೇಳಿಕೊಳ್ಳುತ್ತಿದ್ದಾರೆ. ಇದಕ್ಕೆಲ್ಲ ಮುಂದೆ ಜನ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.
    ರಾಜಕೀಯ ಭಿನ್ನಮತ ದೂರವಿಟ್ಟು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಕೊಡಬೇಕು. ಇಂಥ ಅಪೇಕ್ಷೆ ಅನೇಕ ರಾಜಕೀಯ ಪಕ್ಷಗಳಲ್ಲಿದೆ. ಜೆಡಿಎಸ್‌ನಿಂದಲೂ ಈ ನಿರೀಕ್ಷೆ ಮಾಡುತ್ತೇವೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts