Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಐಎಎಸ್​ಗೆ ಪರ್ಯಾಯ

Monday, 11.06.2018, 3:05 AM       No Comments

ನವದೆಹಲಿ: ಕೇಂದ್ರ ಸರ್ಕಾರದ ಉನ್ನತ ಹುದ್ದೆಗೇರಲು ಐಎಎಸ್ ಅಧಿಕಾರಿಯೇ ಆಗಬೇಕೆಂದಿಲ್ಲ! ಹೌದು, ದೇಶದ ಆಡಳಿತಯಂತ್ರವನ್ನು ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸುವ ಉನ್ನತಾಧಿಕಾರಿಗಳ ನೇಮಕ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಐತಿಹಾಸಿಕ ಬದಲಾವಣೆ ತಂದಿದ್ದು, ಐಎಎಸ್ ಅಧಿಕಾರಿಗಳಿಗೆ ಪರ್ಯಾಯವಾಗಿ ಖಾಸಗಿ ವಲಯದ ತಜ್ಞರನ್ನು ನೇರವಾಗಿ ನೇಮಿಸಿಕೊಳ್ಳುವ ಪರಿಪಾಠಕ್ಕೆ ನಾಂದಿಹಾಡಿದೆ.

ಮೊದಲ ಹಂತವಾಗಿ 10 ಇಲಾಖೆಗಳ ಜಂಟಿ ಕಾರ್ಯದರ್ಶಿ ಹುದ್ದೆಗೆ ವೃತ್ತಿಪರರಿಂದ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಆಡಳಿತ ವ್ಯವಸ್ಥೆಯ ಇತಿಹಾಸದಲ್ಲಿ ಇದು ಮೊದಲ ಪ್ರಯೋಗವಾಗಿದೆ. ಯುಪಿಎಸ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾಕಷ್ಟು ವರ್ಷ ಸೇವಾ ಅನುಭವ ಹೊಂದಿರುವ ಅಧಿಕಾರಿಗಳನ್ನು ಮಾತ್ರ ಜಂಟಿ ಕಾರ್ಯದರ್ಶಿ ಹುದ್ದೆಗೆ ನೇಮಿಸುವುದು ಈವರೆಗಿನ ರೂಢಿ. ಆದರೆ ಇನ್ನು ಖಾಸಗಿ ಕ್ಷೇತ್ರದ ಪರಿಣತರಿಗೂ ಈ ಹುದ್ದೆ ಹೊಂದುವ ಅವಕಾಶ ಸಿಗಲಿದೆ.

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ಹೊಸತನ ತರಲು ಹಾಗೂ ಪ್ರತಿಭಾನ್ವಿತ ವೃತ್ತಿಪರರ ಕ್ರಿಯಾಶೀಲತೆಯನ್ನು ಸರ್ಕಾರಿ ಸೇವೆಯಲ್ಲಿ ಬಳಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಕಾಂಗ್ರೆಸ್ ವಿರೋಧ: ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸಿದ್ದು, ಆಡಳಿತ ವ್ಯವಸ್ಥೆಗೆ ಆರ್​ಎಸ್​ಎಸ್ ಬೆಂಬಲಿಗರನ್ನು ಸೇರಿಸುವ ಷಡ್ಯಂತ್ರ ಇದು ಎಂದು ಆರೋಪಿಸಿದೆ. ಆದರೆ ಈ ಕ್ರಮವನ್ನು ಜೆಡಿಯು ಸ್ವಾಗತಿಸಿದ್ದು, ಪಾರದರ್ಶಕ ನೇಮಕ ಪ್ರಕ್ರಿಯೆ ನಡೆಯಬೇಕು ಎಂದು ಆಗ್ರಹಿಸಿದೆ. ಖಾಸಗಿ ವಲಯದಿಂದ ಕ್ರಿಯಾಶೀಲ ವ್ಯಕ್ತಿಗಳನ್ನು ಆಹ್ವಾನಿಸುವುದು ಶುಭಸಂಕೇತ ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಸುಳಿವು ನೀಡಿದ್ದ ಪ್ರಧಾನಿ ಮೋದಿ

2014ರಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಈ ಕ್ರಾಂತಿಕಾರಕ ಹೆಜ್ಜೆ ಕುರಿತು ನರೇಂದ್ರ ಮೋದಿ ಮುನ್ಸೂಚನೆ ನೀಡಿದ್ದರು. ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ವೃತ್ತಿಪರರನ್ನು ಸರ್ಕಾರಿ ಕೆಲಸಕ್ಕೆ ತೊಡಗಿಸಿಕೊಳ್ಳಬೇಕಿದೆ. ವಿದೇಶಗಳಲ್ಲಿನ ಕೆಲ ಭಾರತೀಯರು ಈ ಬಗ್ಗೆ ಆಸಕ್ತಿ ಹೊಂದಿದ್ದಾರೆ ಎಂದು ಅವರು ಹೇಳಿದ್ದರು. ನೀತಿ ಆಯೋಗವೂ ಸರ್ಕಾರಕ್ಕೆ ಈ ಕುರಿತು ಶಿಫಾರಸು ಮಾಡಿತ್ತು. ಎರಡು ತಿಂಗಳ ಹಿಂದೆ ಪ್ರಧಾನಿ ಕಾರ್ಯಾಲಯ ನೇರ ನೇಮಕಾತಿ ಕುರಿತ ಪ್ರಸ್ತಾವನೆಯ ಪರಿಶೀಲನೆ ನಡೆಸಿತ್ತು.

 

Leave a Reply

Your email address will not be published. Required fields are marked *

Back To Top