More

    ಗ್ಯಾರಂಟಿ ಜಾರಿಗೊಳಿಸಿ ಬದ್ದತೆ ತೋರಿದ ಸರ್ಕಾರ

    ಕಡೂರು: ಗ್ಯಾರಂಟಿ ಯೋಜನೆಗಳಿಗಾಗಿ ಮೀಸಲಿಟ್ಟ 59 ಸಾವಿರ ಕೋಟಿ ರೂ. ವ್ಯಯದಿಂದ ರಾಜ್ಯ ದಿವಾಳಿಯಾಗಲಿದೆ ಎಂಬ ವಿಪಕ್ಷಗಳ ರಾಜಕೀಯ ಪ್ರೇರಿತ ಟೀಕೆಗಳಿಗೆ ಎದೆಗುಂದದೆ ರಾಜ್ಯದಲ್ಲಿ ಬಡವರ ಪರ ಗ್ಯಾರಂಟಿ ಯೋಜನೆಗಳನ್ನುಪರಿಪೂರ್ಣವಾಗಿ ಅನುಷ್ಟಾನಗೊಳಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲುತ್ತದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
    ತಾಪಂ ಸಭಾಂಗಣದಲ್ಲಿ ಸೋಮವಾರ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಆಡಳಿತಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ತನ್ನ ಬದ್ದತೆ ತೋರಿಸಿದೆ ಎಂದರು.
    ಸರ್ಕಾರ ರಚನೆಯಾದ ಕೆಲ ದಿನಗಳಲ್ಲೇ ಶಕ್ತಿ ಯೋಜನೆ ಅನುಷ್ಟಾನಗೊಳಿಸಿ ಹಂತ ಹಂತವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮುಂದೆ ಈ ಯೋಜನೆಗಳೂ ನಿಲ್ಲುವುದಿಲ್ಲ, ಅಭಿವೃದ್ಧಿ ಕಾರ್ಯಗಳು ನಿಲ್ಲುವುದಿಲ್ಲ. ಕಡೂರು ಕ್ಷೇತ್ರದ ಅಭಿವೃದ್ಧಿಗಾಗಿಯೇ ನಾನು ಶಾಸಕನಾದ 7 ತಿಂಗಳಲ್ಲಿ 93 ಕೋಟಿ ರೂ. ಅನುದಾನ ನೀಡುವ ಮೂಲಕ ಕ್ಷೇತ್ರದ ಅಭಿವರದ್ಧಿಗೂ ಸರ್ಕಾರ ಒತ್ತು ನೀಡುತ್ತಿದೆ. ವಿರೋಧಿಗಳು ಇದನ್ನು ಮನಗಾಣಬೇಕು ಎಂದರು.
    ತಾಪಂ ಇಒ ಸಿ.ಆರ್.ಪ್ರವೀಣ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಎ.ಬಿ.ಸಂಜಯ್. ಮೆಸ್ಕಾಂ ಉಪವಿಭಾಗೀಯ ಎಇ ಲಿಂಗರಾಜು, ಕೆಎಸ್‌ಆರ್‌ಟಿಸಿ ಜಿಲ್ಲಾ ವ್ಯವಸ್ಥಾಪಕ ಬಸವರಾಜ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts