

ಸುಳ್ಯ: ರಾಜ್ಯ ಸರ್ಕಾರ ರೈತರ ಆಸ್ತಿಯನ್ನು ವಕ್ಫ್ ಆಸ್ತಿಯಾಗಿ ಪರಿವರ್ತಿಸುವ ಹುನ್ನಾರದಲ್ಲಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿ ಬೀದಿಗಿಳಿದು ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ರಾಜ್ಯದಲ್ಲಿ ರೈತರ ಭೂಮಿ ವಕ್ಫ್ ಆಸ್ತಿಯಾಗಿ ಮಾರ್ಪಾಡಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು ಸಿದ್ದರಾಮಯ್ಯ ಸರ್ಕಾರದ ಕ್ರಮದಿಂದ ಅನ್ನದಾತರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಜನರ ನೆಮ್ಮದಿ ಹಾಳಾಗಿದೆ. ಪ್ರತಿದಿನ ಪ್ರತಿಭಟನೆ ಮಾಡುವ ಸ್ಥಿತಿ ನಿರ್ಮಾಣ ಆಗಿದೆ. ಈ ಸರ್ಕಾರ ಜನರನ್ನು ಬೀದಿಗೆ ತಳ್ಳುವ ಗ್ಯಾರಂಟಿ ನೀಡುತ್ತಿದೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಸುಳ್ಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ, ನಪಂ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ ಬಿಜೆಪಿ ಮುಖಂಡರಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಸುರೇಶ್ ಕಣೆಮರಡ್ಕ ವಿನಯ ಕುಮಾರ್ ಮುಳುಗಾಡು, ಶ್ರೀನಾಥ್ ಬಾಳಿಲ, ಜಯಪ್ರಕಾಶ್ ಕುಂಚಡ್ಕ ನಾರಾಯಣ ಶಾಂತಿನಗರ, ಶಂಕರ ಪೆರಾಜೆ, ಶ್ರೀಕಾಂತ್ ಮಾವಿನಕಟ್ಟೆ, ಪ್ರದೀಪ್ ಕೊಲ್ಲರಮೂಲೆ, ಗುಣವತಿ ಕೊಲ್ಲಂತ್ತಡ್ಕ ಪುಷ್ಪಾ ಮೇದಪ್ಪ, ಭಾರತಿ ಉಳುವಾರು, ಸರೋಜಿನಿ ಪೆಲ್ಲಡ್ಕ, ಸುನೀಲ್ ಕೇರ್ಪಳ, ದಯಾನಂದ ಕೇರ್ಪಳ, ಶಂಕರ ಪೆರಾಜೆ, ಶಿವಾನಂದ ಕುಕ್ಕುಂಬಳ, ಚನಿಯ ಕಲ್ತಡ್ಕ, ಜಯರಾಜ್ ಕುಕ್ಕೇಟ್ಟಿ,ರಾಕೇಶ್ ಮೆಟ್ಟಿನಡ್ಕ, ಪ್ರಬೋದ್ ಶೆಟ್ಟಿ ಮೇನಾಲ, ಹರೀಶ್ ಬೂಡುಪನ್ನೆ ಅಶೋಕ್ ಅಡ್ಕಾರು, ಕಿರಣ್ ಕುರುಂಜಿ ಮತ್ತಿತರರು ಉಪಸ್ಥಿತರಿದ್ದರು. ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.