More

    ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ ಟಿಪ್ಪು ಆಡಳಿತ

    ಬಳ್ಳಾರಿ : ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ. ಟಿಪ್ಪು ಆಡಳಿತ. ಸಿದ್ದರಾಮಯ್ಯ ಎರಡನೇ ಟಿಪ್ಪುಸುಲ್ತಾನ್ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.

    ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹನುಮಾನ್ ಧ್ವಜವನ್ನು ಕೆಳಗೆ ಇಳಿಸುವ ಕಾಂಗ್ರೆಸ್ಸಿಗರು, ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಶುಕ್ರವಾರ ನಡೆಯುವ ಪರೀಕ್ಷೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇದು ಸರಿಯಾದ ಕ್ರಮವಲ್ಲ.ಒಂದು ಸಮುದಾಯದ ಓಲೈಕೆಗೆ ಈ ರೀತಿ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಇನ್ನು ತೆರಿಗೆ ಸಂಘರ್ಷ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ 2004ರಿಂದ 2014 ರ ವರೆಗೆ ಕೇಂದ್ರದಿಂದ 82 ಸಾವಿರ ಕೋಟಿ ರೂ. ಹಣ ರಾಜ್ಯಕ್ಕೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ರಾಜ್ಯಕ್ಕೆ 2.13 ಲಕ್ಷ ಕೋಟಿ ರೂ. ಹಣ ಬಂದಿದೆ. ಕೇಂದ್ರದ ವಿರುದ್ಧ ಪ್ರತಿಭನಟನೆ ಮಾಡಲು ಕಾಂಗ್ರೆಸ್ ನಾಯಕರಿಗೆ ನೈತಿಕತೆ ಇಲ್ಲ ಎಂದರು.

    ಹಾಲಿನ ಪ್ರೋತ್ಸಾಹಧನ ಇನ್ನು 719 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಅದನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯಸರ್ಕಾರದಿಂದ 4 ಸಾವಿರ ರೂ. ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಅದನ್ನು ನಿಲ್ಲಿಸಿದೆ. ಅಬಕಾರಿ, ನೋಂದಣಿ ಶುಲ್ಕ ಹೆಚ್ಚಳ ಮಾಡಿದೆ. ಇದೊಂದು ವಸೂಲಿ ಸರ್ಕಾರ ಎಂದು ಟೀಕಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts