More

    ಸರ್ಕಾರ ಸಚಿವ ಸುಧಾಕರ ರಕ್ಷಣೆ ಮಾಡುತ್ತಿಲ್ಲ

    ರಾಯಚೂರು: ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಸಿದಂತೆ ಸಚಿವ ಡಿ.ಸುಧಾಕರ ಸೇರಿದಂತೆ ಯಾರನ್ನೂ ಸರ್ಕಾರ ರಕ್ಷಣೆ ಮಾಡುತ್ತಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಕಾನೂನಾತ್ಮಕ ಕ್ರಮವಾಗಲಿದೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
    ನಗರದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಸಚಿವರ ವಿರುದ್ಧ ಜಾತಿ ನಿಂದನೆ ಸೇರಿದಂತೆ ದಾಖಲಾಗಿರುವ ದೂರುಗಳ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.
    ಪ್ರಕರಣವನ್ನು ರಾಜಕೀಯಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿಂದೆ ಕೇಂದ್ರ ಸಚಿವರ ಪುತ್ರ ರೈತರ ಮೇಲೆ ವಾಹನ ಚಲಾಯಿಸಿ ರೈತರ ಸಾವಿಗೆ ಕಾರಣವಾಗಿದ್ದಾಗ ಬಿಜೆಪಿ ನಾಯಕರು ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.
    ಚೈತ್ರಾ ಕುಂದಾಪುರ ಬಿಜೆಪಿ ಬೆಂಬಲಿಗರು ಎಂದು ಬಂಸಿಲ್ಲ. ದೂರುದಾರರು ಸಲ್ಲಿಸಿರುವ ದೂರಿನ ಮೇಲೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನೂ ಬಂಸಲಾಗುವುದು. ತನಿಖೆಯಿಂದ ಎಲ್ಲ ಬಯಲಾಗಲಿದೆ.
    ಪಕ್ಷ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಅಭ್ಯರ್ಥಿ ಯಾರಾಗಲಿದ್ದಾರೆ ಎಂದು ಈಗಲೇ ಹೇಳಲು ಆಗುವುದಿಲ್ಲ. ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಎನ್.ಎಸ್.ಬೋಸರಾಜು ಹೇಳಿದರು.
    ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಜಯಣ್ಣ, ಜಿಂದಪ್ಪ, ಬಸವರಾಜ ಪಾಟೀಲ್ ದರೂರ, ಮುಖಂಡರಾದ ಅಮರೇಗೌಡ ಹಂಚಿನಾಳ, ನರಸಿಂಹಲು ಮಾಡಗಿರಿ, ಜಿ.ತಿಮ್ಮಾರೆಡ್ಡಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts