ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಹೊಣೆ: ಬಿಜೆಪಿ ಮೈಸೂರು ನಗರ ವಕ್ತಾರ ಎಂ.ಮೋಹನ್ ಆರೋಪ

16
Published on

ಮೈಸೂರು: ಬೆಂಗಳೂರಿನಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನ ಮೃತಪಟ್ಟಿದ್ದು, 47 ಮಂದಿ ಗಾಯಗೊಂಡಿರುವುದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ. ಸರ್ಕಾರದ ನಿರ್ಲಕ್ಷೃದಿಂದಲೇ ಈ ದುರ್ಘಟನೆ ನಡೆದಿದೆ ಎಂದು ಬಿಜೆಪಿ ಮೈಸೂರು ನಗರ ವಕ್ತಾರ ಎಂ.ಮೋಹನ್ ಆರೋಪಿಸಿದರು.

ಈ ದುರಂತ ಸರ್ಕಾರದಿಂದಲೇ ಆದಂತಹ ಕೊಲೆ. ಆರ್‌ಸಿಬಿ ಮ್ಯಾಚ್ ನಡೆಯುವ ಮುಂಚೆ ಗೆಲುವಿಗಾಗಿ ಪೂಜೆ ಪುನಸ್ಕಾರ ನಡೆಯಿತು. ನಂತರ ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿತು. ಮುಖ್ಯಮಂತ್ರಿಗಳ ಅಣತಿ ಮೇರೆಗೆ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಯಿತು. ಇದಕ್ಕಾಗಿ ವಿಶೇಷ ವಿಮಾನದ ಮೂಲಕ ಆಟಗಾರರನ್ನು ಕರೆಸಿದರು. ರಾತ್ರಿಯೆಲ್ಲ ಡ್ಯೂಟಿ ಮಾಡಿ ಸುಸ್ತಾಗಿದ್ದ ಪೊಲೀಸರಿಗೆ ಮತ್ತೆ ಕೆಲಸ ಮಾಡುವುದು ಕಷ್ಟವಾಯಿತು. ಸರ್ಕಾರದ ವೈಫಲ್ಯದಿಂದಲೇ ದುರ್ಘಟನೆ ನಡೆದಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

11 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಸರ್ಕಾರದಿಂದ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡು ಸಿಎಂ, ಡಿಸಿಎಂ ಸ್ವತಃ ರಾಜೀನಾಮೆ ಕೊಡಬೇಕು. ಸೋಷಿಯಲ್ ಮೀಡಿಯಾದಲ್ಲಿ ಸರ್ಕಾರವನ್ನು ಎಲ್ಲರೂ ಖಂಡಿಸುತ್ತಿದ್ದಾರೆ. ಈ ಸರ್ಕಾರದಲ್ಲಿ ನಮಗೆ ನಂಬಿಕೆ ಇಲ್ಲ. ಈ ಸರ್ಕಾರ ಹಣ ಹೊಡೆಯುವ ಸರ್ಕಾರ, ಹೆಣ ಬೀಳಿಸುವ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಮಾಧ್ಯಮ ಸಹ ಸಂಚಾಲಕ ಬಿ.ಎಂ. ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net